ಚಿನ್ನ ಕದ್ದವನ ಬಂಧನ

ಚಿನ್ನ ಕದ್ದವನ ಬಂಧನ


ಕುಂದಾಪುರ: ಚಿನ್ನ ಖರೀದಿಸುವ ನೆಪದಲ್ಲಿ ಅಂಗಡಿಯ ಕೆಲಸಗಾರರ ಗಮನ ತಪ್ಪಿಸಿ ಚಿನ್ನದ ಸರ ಕಳವುಗೈದ ಆರೋಪಿಯನ್ನು ಕುಂದಾಪುರ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

ಬಂಧಿತನನ್ನು ರಮೇಶ್ (42) ಎಂದು ಗುರುತಿಸಲಾಗಿದೆ. 

ಕುಂದಾಪುರ ಶಾಸ್ತ್ರಿ ಸರ್ಕಲ್ ಸಮೀಪದ ಚಿನ್ನಾಭರಣ ಅಂಗಡಿಗೆ ಬಂದ ಆರೋಪಿ, ಚಿನ್ನದ ಸರವನ್ನು ಪರಿಶೀಲಿಸುವ ನೆಪದಲ್ಲಿ ಸಿಬ್ಬಂದಿಯ ಕಣ್ಣು ತಪ್ಪಿಸಿ ಸುಮಾರು 9 ಗ್ರಾಂ ತೂಕದ, ಅಂದಾಜು ರೂ.1.25 ಲಕ್ಷ ಮೌಲ್ಯದ ಚಿನ್ನದ ಸರವನ್ನು ಕಳವು ಮಾಡಿಕೊಂಡು ಹೋಗಿದ್ದ.

ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ಕಳವುಗೈದ ಚಿನ್ನದ ಸರ ಹಾಗೂ ಆತನ ವಶದಲ್ಲಿದ್ದ ರೂ.33,000 ನಗದನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article