ವಾರಂಟ್ ಆರೋಪಿಯ ಬಂಧನ
ಬಂಧಿತನನ್ನು ಗುಲ್ವಾಡಿ ಸೌಕೂರು ಆಳ್ವರ ಮನೆಯ ಶಶಾಂಕ್ ಶೆಟ್ಟಿ (32) ಎಂದು ಗುರುತಿಸಲಾಗಿದೆ.
ಈತನ ವಿರುದ್ಧ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ 7 ಪ್ರಕರಣಗಳು ದಾಖಲಾಗಿದ್ದು, ಹೆಬ್ರಿ, ಕಲಘಟಕಿ, ಕೋಟ ಹಾಗೂ ಬೆಂಗಳೂರು ಚಂದ್ರ ಲೇಔಟ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣದಂತೆ ಒಟ್ಟು 11 ಕಳ್ಳತನ, ಸುಲಿಗೆ ಹಾಗೂ ಹನಿಟ್ರ್ಯಾಪ್ ಪ್ರಕರಣಗಳು ದಾಖಲಾಗಿವೆ.
ಈತನ ವಿರುದ್ಧ ನ್ಯಾಯಾಲಯವು ಇದುವರೆಗೆ 12 ಬಾರಿ ವಾರಂಟ್ ಜಾರಿಗೊಳಿಸಿದ್ದರೂ, ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.
ಆರೋಪಿಯ ಪತ್ತೆಗಾಗಿ ಕಳೆದ ನಾಲ್ಕು ವರ್ಷಗಳಿಂದ ಪೊಲೀಸರು ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಫೆಬ್ರವರಿ 15ರಂದು ಕುಂದಾಪುರ ತಾಲೂಕು ಬಿದ್ಕಲ್ಕಟ್ಟೆ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಲಾಯಿತು.
ಕುಂದಾಪುರ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ ಹಾಗೂ ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ ಎ. ಕಾಯ್ಕಿಣಿ ಅವರ ಮಾರ್ಗದರ್ಶನದಲ್ಲಿ, ಕುಂದಾಪುರ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರಾದ ನಾಸೀರ್ ಹುಸೇನ್ ಮತ್ತು ಚಂದ್ರಕಲಾ ಎಂ. ಪತ್ತಾರ ಅವರ ನೇತೃತ್ವದಲ್ಲಿ ಠಾಣಾ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದರು.