ವಾಟ್ಸಾಪ್ ಸಂದೇಶ ಫಾರ್ವರ್ಡ್ ಮಾಡಿ ಬಂಧನಕ್ಕೊಳಗಾದವರಿಗೆ ಜಾಮೀನು

ವಾಟ್ಸಾಪ್ ಸಂದೇಶ ಫಾರ್ವರ್ಡ್ ಮಾಡಿ ಬಂಧನಕ್ಕೊಳಗಾದವರಿಗೆ ಜಾಮೀನು

ಕುಂದಾಪುರ: ಧರ್ಮಗಳ ನಡುವೆ ದ್ವೇಷ ಭಾವನೆ ಉಂಟು ಮಾಡುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸಂತೋಷ್ ಹಾಗೂ ಕೋಟೇಶ್ವರ ಕೆ. ನಾಗರಾಜ ಎಂಬವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ,

ಬ್ರಹ್ಮಾವರದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಡುಪಿ ಪ್ರಥಮ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

“ಶಿರಡಿ ಸಾಯಿ ಬಾಬಾ ಜೇಬಿಗೆ ಹಾಕಿದ ಹಿಂದೂಗಳ ಹಣ ಎಲ್ಲಿಗೆ ಹೋಗುತ್ತದೆ, ನೀವೇ ನೋಡಿ. ದೇಶದ ಎಲ್ಲಾ ಹಿಂದೂಗಳಿಗೆ ಅದು ತಲುಪಬೇಕು” ಎಂಬ ಅರ್ಥದ ವಿಡಿಯೋವನ್ನು ವಾಟ್ಸಪ್ ಗ್ರೂಪ್‌ನಲ್ಲಿ ಹಂಚಿಕೊಂಡು, ಸಾರ್ವಜನಿಕರಲ್ಲಿ ತಪ್ಪು ಸಂದೇಶ ಹಾಗೂ ಧರ್ಮ ದ್ವೇಷ ಭಾವನೆ ಮೂಡಿಸಿದ್ದಾರೆ ಎಂಬ ಆರೋಪದ ಮೇಲೆ, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ  ವಿವಿಧ ಕಲಮುಗಳಡಿ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

ಒಂದನೇ ಆರೋಪಿಯ ಪರವಾಗಿ ಕುಂದಾಪುರದ ನ್ಯಾಯವಾದಿ ಬನ್ನಾಡಿ ಸೋಮನಾಥ ಹೆಗ್ಡೆ, ಎರಡನೇ ಆರೋಪಿಯ ಪರವಾಗಿ ಕುಂದಾಪುರದ ನ್ಯಾಯವಾದಿ ಕಾಳಾವರ ಉದಯ್ ಶೆಟ್ಟಿ ವಾದ ಮಂಡಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article