ಕರ್ತವ್ಯದ ವೇಳೆ ಮೀನುಗಾರ ಸಮುದ್ರಕ್ಕೆ ಬಿದ್ದು ಸಾವು

ಕರ್ತವ್ಯದ ವೇಳೆ ಮೀನುಗಾರ ಸಮುದ್ರಕ್ಕೆ ಬಿದ್ದು ಸಾವು


ಕುಂದಾಪುರ: ಬ್ರಹ್ಮಾವರ ತಾಲೂಕು ಬಾಳ್ಕುದ್ರು ಗ್ರಾಮದ ಹಂಗಾರಕಟ್ಟೆಯಲ್ಲಿ ಈಶ್ವರಿ ಎಂಬ ಹೆಸರಿನ ಬೋಟಿನಲ್ಲಿ ಮೀನುಗಾರಿಕೆ ವೃತ್ತಿ ಮಾಡಿಕೊಂಡಿದ್ದ ಮಣೂರು ಗ್ರಾಮದ ನಟರಾಜ್ (36) ಅವರು ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಫೆಬ್ರವರಿ 3ರಂದು ರಾತ್ರಿ ಸಂಭವಿಸಿದೆ. 

ಊಟದ ಬಳಿಕ ಕೈ ತೊಳೆಯುವ ವೇಳೆ ಆಯತಪ್ಪಿ ಸಮುದ್ರಕ್ಕೆ  ಬಿದ್ದ ನಟರಾಜ್ ಅವರನ್ನು ಸಹಕಾರ್ಮಿಕರು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಬಳಿಕ ಫೆಬ್ರವರಿ 4ರಂದು ಬೆಳಿಗ್ಗೆ ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ  ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article