ಫೆ.22 ರ ಸಂಜೆ ‘ಸ್ತ್ರೀ ಶಕ್ತಿ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಫೆ.22 ರ ಸಂಜೆ ‘ಸ್ತ್ರೀ ಶಕ್ತಿ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಮಂಗಳೂರು: ಮಂಗಳೂರಿನ ಸಂಗೀತ ಭಾರತಿ ಪ್ರತಿಷ್ಠಾನದ ಆಶ್ರಯದಲ್ಲಿ ‘ಸ್ತ್ರೀ ಶಕ್ತಿ’ ಎಂಬ ಪರಿಕಲ್ಪನೆಯಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಫೆ.22 ರಂದು ಸಂಜೆ 5 ಗಂಟೆಯಿಂದ ನಗರದ ಮಂಗಳೂರಿನ ಉರ್ವ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆಯಲಿದೆ.

ಉತ್ಕೃಷ್ಟ ಮಟ್ಟದ ‘ಶಾಸ್ತ್ರೀಯ ಗಾಯನ ಜುಗಲ್‌ಬಂಧಿ’ ಮತ್ತು ‘ವಯೋಲಿನ್ ಟ್ರಿಯೋ’ ಕಾರ್ಯಕ್ರಮಗಳು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಇದ್ದು, ಸಂಗೀತಪ್ರಿಯರಿಗೆ ಇದೊಂದು ಸಂಗೀತದ ರಸದೌತಣವಾಗಲಿದೆ.

ಪೂರ್ವಾರ್ಧದಲ್ಲಿ ಯಲ್ಲಾಪುರದ ವಿಭಾ ಹೆಗ್ಡೆ ಮತ್ತು ಬೆಂಗಳೂರಿನ ಶಿವಾನಿ ಮಿರ್ಜಾಕಾರ್ ಇವರಿಂದ ಶಾಸ್ತ್ರೀಯ ಗಾಯನ ‘ಜುಗಲ್‌ಬಂಧಿ’ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೆ ಹಾರ್ಮೋನಿಯಂನಲ್ಲಿ ಮಂಗಳೂರಿನ ಮೇಧಾ ಜಿ. ಭಟ್ ಮತ್ತು ಭೋಪಾಲ್‌ನ ವಿಜೇತಾ ಹೆಗ್ಡೆ ಅವರು ತಬ್ಲಾದಲ್ಲಿ ಸಾಥ್ ನೀಡಲಿದ್ದಾರೆ.

ಉತ್ತಾರಾರ್ಧದಲ್ಲಿ ಮುಂಬೈನ ಡಾ. ಸಂಗೀತ ಶಂಕರ್, ರಾಗಿಣಿ ಶಂಕರ್ ಮತ್ತು ನಂದಿನಿ ಶಂಕರ್ ಅವರಿಂದ ‘ವಯೋಲಿನ್ ಟ್ರಿಯೋ’ ಕಾರ್ಯಕ್ರಮ ನಡೆಯಲಿದೆ. ಇವರಿಗೆ ತಬ್ಲಾದಲ್ಲಿ ಮುಂಬೈನ ಅನುರಾಧ ಪಾಲ್ ಅವರು ಸಾಥ್ ನೀಡಲಿದ್ದಾರೆ.

ಈ ‘ಸ್ತ್ರೀ ಶಕ್ತಿ’ ಕಾರ್ಯಕ್ರಮವನ್ನು ನಗರದ ಪ್ರಖ್ಯಾತ ಸಂಗೀತಾ ಗುರುಗಳಾದ ಬಸ್ತಿ ಕವಿತಾ ಶೆಣೈ, ವಿಭಾ ನಾಯಕ್ ಹಾಗೂ ಶ್ರೀಲತಾ ಪ್ರಭು ಅವರು ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಸಂಗೀತಾಸಕ್ತರೆಲ್ಲರಿಗೂ ಮುಕ್ತ ಪ್ರವೇಶಾವಕಾಶವಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಗೀತ ಭಾರತಿ ಪ್ರತಿಷ್ಠಾನದ ಉಪಾಧ್ಯಕ್ಷ ನರೇಂದ್ರ ಎಲ್. ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article