ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 37,337 ಮಂದಿ ಅಭ್ಯರ್ಥಿಗಳು: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 37,337 ಮಂದಿ ಅಭ್ಯರ್ಥಿಗಳು: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.


ಮಂಗಳೂರು: ಮುಂಬರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ ಒಟ್ಟು 59 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 18,745 ವಿದ್ಯಾರ್ಥಿಗಳು ಮತ್ತು 18592 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 37,337 ಮಂದಿ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

ದ.ಕ. ಜಿಲ್ಲಾ ಪಂಚಾಯತ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು 15 ಸರಕಾರಿ, 22 ಖಾಸಗಿ ಮತ್ತು 22 ಅನುದಾನರಹಿತ ಖಾಸಗಿ ಕಾಲೇಜುಗಳು ಸೇರಿದಂತೆ 59 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಮಂಗಳೂರು 21, ಬಂಟ್ವಾಳ 6, ಬೆಳ್ತಂಗಡಿ 8, ಪುತ್ತೂರು 5, ಸುಳ್ಯ 2, ಕಡಬ 5, ಮೂಡಬಿದ್ರೆ 6, ಉಳ್ಳಾಲ 4, ಮೂಲ್ಕಿ ತಾಲೂಕಿನಲ್ಲಿ 2 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ವಿಜ್ಞಾನ ವಿಭಾಗದಲ್ಲಿ ಗರಿಷ್ಠ: ದ.ಕ. ಜಿಲ್ಲೆಯಲ್ಲಿ ವಿಜ್ಞಾನ ವಿಭಾಗದಲ್ಲಿ 18,559 ಮಂದಿ (ವಿದ್ಯಾರ್ಥಿಗಳು  8983 ಮತ್ತು ವಿದ್ಯಾರ್ಥಿನಿಯರು 9,576), ರೆಗ್ಯುಲರ್ 18401 (ಗಂ.8,901 ಮತ್ತು ಹೆ.9,500), ರಿಪೀಟರ್ 158 ಮಂದಿ

ಕಲಾವಿಭಾಗ: 3,724: ಕಲಾವಿಭಾಗದಲ್ಲಿ 3,724 ಮಂದಿ. ಈ ಪೈಕಿ ವಿದ್ಯಾರ್ಥಿನಿಯರು 2,047 ಮತ್ತು ವಿದ್ಯಾರ್ಥಿಗಳು 1,677, ರೆಗ್ಯುಲರ್ 3,326 ಮಂದಿ, ರಿಪೀಟರ್ 92ಮತ್ತು ಖಾಸಗಿ 306 ಮಂದಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 15,054: ವಾಣಿಜ್ಯ ವಿಭಾಗದಲ್ಲಿ 15,054 ಮಂದಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು 8,085 ಮತ್ತು ವಿದ್ಯಾರ್ಥಿನಿಯರು 6969ಮಂದಿ. ಖಾಸಗಿ ೯೮೮ ಮತ್ತು ರಿಪೀಟರ್ 207 ಮಂದಿ ಎಂದು ಡಿಸಿ ದರ್ಶನ್ ಎಚ್‌ವಿ ಮಾಹಿತಿ ನೀಡಿದರು.

ಜಿ ವ್ಯಾಪ್ತಿಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳ ಸಾಗಾಣಿಕೆಗಾಗಿ ಒಟ್ಟು 16 ಮಾರ್ಗಗಳನ್ನು ಕಲ್ಪಿಸಲಾಗಿದೆ, ತ್ರಿಸದಸ್ಯ ಸಮಿತಿ ಸದಸ್ಯರನ್ನೊಳಗೊಂಡ 16 ತಂಡಗಳನ್ನು ನಿಯೋಜಿಸಲಾಗಿದೆ.

ಜಿ ವ್ಯಾಪ್ತಿಯಲ್ಲಿರುವ ಎ ಪರೀಕ್ಷಾ ಕೇಂದ್ರಗಳ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣವನ್ನು ಪಡೆಯಲಾಗಿದೆ. ಪರೀಕ್ಷಾ ಕಾರ್ಯಕ್ಕೆ ಅಗತ್ಯವಿರುವ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರಶ್ನೆಪತ್ರಿಕೆ ವಿತರಣೆಗಾಗಿ ತ್ರಿಸದಸ್ಯ ಸಮಿತಿ ನೇಮಕ ಮಾಡಲಾಗಿದೆ.

ಪ್ರಶ್ನೆಪತ್ರಿಕೆ ವಿತರಣೆ ಮತ್ತು ಜಿ ಜಾಗೃತದಳದ ಸದಸ್ಯರುಗಳಿಗೆ ವಾಹನ ವ್ಯವಸ್ಥೆ ಹಾಗೂ ಜಿಪಿಎಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಕೆಎಸ್‌ಇಎಸ್ ಅಡಿಯಲ್ಲಿ ಕಾರ್ಯನಿರ್ವಹಿಸುವ ಎ ಅಽಕಾರಿ, ಸಿಬ್ಬಂದಿವರ್ಗದ ಬಯೋಮೆಟ್ರಿಕ್ ಹಾಜರಾತಿಗೆ ನೋಂದಣಿ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಗೌಪ್ಯವಸ್ತುಗಳನ್ನು ವಿತರಿಸುವ ಚಟುವಟಿಕೆಗಳನ್ನು ಖಜಾನೆಯ ಒಳಗೆ ಮತ್ತು ಹೊರಗೆ 24*7 ಸಿಸಿಟಿವಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

2026 ಫೆ. 28ರಿಂದ ಮಾ.17 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-1ರ ಜಿ ವ್ಯಾಪ್ತಿಯ 59 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದು ನುಡಿದರು.

ಪರೀಕ್ಷಾ ಅವಧಿಗಳಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಎಸ್‌ಎಸ್‌ಎಲ್‌ಸಿಗೆ 29,397 ಅಭ್ಯರ್ಥಿಗಳು:ದ.ಕ. ಜಿಲ್ಲೆಯಲ್ಲಿ ಮಾ.18ರಿಂದ ಆರಂಭವಾಗಲಿರುವ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 29,397 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ ರೆಗ್ಯುಲರ್ 27,633, ಖಾಸಗಿ 979, ರೆಗ್ಯುಲರ್ ರಿಪೀಟರ್ 632, ರಿಪೀಟರ್ ಖಾಸಗಿ 153 ಆಗಿದ್ದು, ಜಿಯ ಒಟ್ಟು 524 ಪ್ರೌಢಶಾಲೆಗಳ ಅಭ್ಯರ್ಥಿಗಳು 91 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿzರೆ ಎಂದು ಡಿಸಿ ದರ್ಶನ್ ಎಚ್.ವಿ. ಇದೇ ಸಂದರ್ಭದಲ್ಲಿ ಮಾಹಿತಿ  ನೀಡಿದರು.

22 ಕ್ಲಸ್ಟರ್ ಹಾಗೂ 38 ಕ್ಲಸ್ಟರ್ ರಹಿತ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. 22 ಕ್ಲಸ್ಟರ್ ಗಳಲ್ಲಿ 53 ಪರೀಕ್ಷಾ ಕೇಂದ್ರಗಳಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪ್ರತೀ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು ಸುಮಾರು 1265 ಕೊಠಡಿಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಪ್ರತೀ ಪರೀಕ್ಷಾ ಕೇಂದ್ರಕ್ಕೆ ಓರ್ವ ಕೇಂದ್ರ ಮುಖ್ಯ ಅಽಕ್ಷಕರು, ಓರ್ವ ಅಭಿರಕ್ಷಕರು, ಓರ್ವ ಸ್ಥಾನೀಯ ಜಾಗೃತ ದಳದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. 350 ಕ್ಕಿಂತ ಹೆಚ್ಚು ಮಕ್ಕಳಿದ್ದ ಕೇಂದ್ರಗಳಿಗೆ ಓರ್ವ ಉಪ ಮುಖ್ಯ ಅಽಕ್ಷಕರನ್ನು ನಿಯೋಜಿಸಲಾಗಿದೆ.

ಪ್ರತೀ ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ, ಗಾಳಿ ಬೆಳಕು ಇತ್ಯಾದಿ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ.

ಮಕ್ಕಳು ಪರೀಕ್ಷೆಯನ್ನು ಹಬ್ಬವೆಂದು ಪರಿಗಣಿಸಿ ಪರೀಕ್ಷೆಗೆ ಹಾಜರಾಗಲು ಎ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಲು ಸೂಚಿಸಲಾಗಿದೆ. ವಿಕಲ ಚೇತನ ಮಕ್ಕಳಿಗೆ ನೆಲ ಮಹಡಿಯಲ್ಲಿ ಆಸನ ವ್ಯವಸ್ಥೆ ಸೇರಿದಂತೆ, ಮಂಡಳಿ ನಿಗದಿಪಡಿಸಿದ ಎ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.

ಅಗತ್ಯ ಭದ್ರತಾ ವ್ಯವಸ್ಥೆ, ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಇತ್ಯಾದಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಈಗಾಗಲೇ 2 ಪೂರ್ವಸಿದ್ಧತಾ ಪರೀಕ್ಷೆಗಳ ಮೂಲಕ ಮಕ್ಕಳಿಗೆ ಪರೀಕ್ಷೆಗೆ ತಯಾರಾಗಲು ಮಾರ್ಗದರ್ಶನ ನೀಡಲಾಗಿದ್ದು ಫೆ.23 ರಿಂದ ೩ನೇ ಹಾಗೂ ಅಂತಿಮ ಸಿದ್ಧತಾ ಪರೀಕ್ಷೆ ನಡೆಯಲಿದೆ ಎಂದು ಡಿಸಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ದ.ಕ.ಜಿ.ಪಂ ಸಿಇಒ ವಿನಾಯಕ ನರ್ವಾಡೆ, ದ.ಕ.ಜಿಲ್ಲಾ ಎಸ್ಪಿ ಡಾ.ಅರುಣ್, ಡಿಡಿಪಿಐ ಶಶಿಧರ್ ಜಿ.ಎಸ್, ಡಿಡಿಪಿಯು ರಾಜೇಶ್ವರಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article