ಸಾಲ ಮಾಡಿಯಾದರೂ ತುಪ್ಪ ತಿನ್ನು ಎನ್ನುವ ಬಜೆಟ್: ಕೆ. ಹರೀಶ್ ಕುಮಾರ್
Sunday, February 1, 2026
ಮಂಗಳೂರು: ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿರುವ ಬಜೆಟ್‌ನಲ್ಲಿ ಯಾವುದೇ ಹೊಸ ಹೊಸ ಯೋಜನೆಗಳಿಲ್ಲ. ಸಾಲ ಮಾಡಿಯಾದರೂ ತುಪ್ಪ ತಿನ್ನು ಎನ್ನುವ ಹಾಗೆ ಒಟ್ಟು ಬಜೆಟ್‌ನಲ್ಲಿ 16.9 ಲಕ್ಷ ಕೋಟಿ ಸಾಲ ಮಾಡುತ್ತಿರುವ ಮೋದಿ-ನಿರ್ಮಲಾ ಸೀತಾರಾಮನ್ ಅವರ ಸಾಲದ ಸರ್ಕಾರ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ. ಹರೀಶ್ ಕುಮಾರ್ ಪ್ರತಿಕ್ರಿಯಿಸಿದರು.
ಚುನಾವಣಾ ಹೊಸ್ತಿಲಲ್ಲಿರುವ ರಾಜ್ಯಗಳಿಗೆ ಬಂಪರ್ ಕೊಡುಗೆ ನೀಡಲಾಗಿದೆ. ರೈತರ ಕೃಷಿ ಸಾಲ ಮನ್ನಾ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ. ಕೆಳ, ಮಧ್ಯಮ ಕುಟುಂಬಗಳಿಗೆ ಹೊರೆಯಾಗಿದೆ. ಕೇಂದ್ರ ಸರ್ಕಾರ ಹಿಂದಿನಿಂದಲೂ ಅನುಸರಿಸಿಕೊಂಡು ಬಂದಿರುವ ತಾರತಮ್ಯ ನೀತಿಯನ್ನು ಮತ್ತೆ ಮುಂದುವರಿಸುತ್ತಿದ್ದು, ಮತ್ತೊಮ್ಮೆ ಕರ್ನಾಟಕಕ್ಕೆ ನಿರ್ಮಲಮ್ಮನ ಉಂಡೆನಾಮ ಎಂದು ಕೆ. ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.