ಕಾಮಗಾರಿ ವೇಳೆ ತಡೆಗೋಡೆ ಕುಸಿತ ಕಾರ್ಮಿಕ ಸಾವು

ಕಾಮಗಾರಿ ವೇಳೆ ತಡೆಗೋಡೆ ಕುಸಿತ ಕಾರ್ಮಿಕ ಸಾವು

ಮಂಗಳೂರು: ಉಜಿರೆ-ಸೂರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಇಂದು ನಡೆದಿದೆ.

ಬಿಹಾರ ಮೂಲದ ರಾಕೇಶ್ ಕುಮಾರ್ (25) ಮೃತ ಕಾರ್ಮಿಕ. ಬೆಳ್ತಂಗಡಿ ತಾಲೂಕಿನ ಉಜಿರೆ-ಸೂರ್ಯ ರಸ್ತೆಯಲ್ಲಿ ಜ.31ರ ಬೆಳಗ್ಗೆ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆ ಕುಸಿದು ಬಿದ್ದ ಪರಿಣಾಮ ರಾಕೇಶ್ ಕುಮಾರ್ ಮಣ್ಣಿನಡಿ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ರಕ್ಷಣೆಗೆ ಧಾವಿಸಿ ಅವರನ್ನು ಹೊರತೆಗೆದು ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಇನ್ನಿಬ್ಬರು ಕಾರ್ಮಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. 

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article