ವಿಕಸಿತ ಭಾರತದತ್ತ ಇಟ್ಟಿರುವ ಇನ್ನೊಂದು ಧೃಡ ಹೆಜ್ಜೆ: ಕ್ಯಾ. ಗಣೇಶ್ ಕಾರ್ಣಿಕ್

ವಿಕಸಿತ ಭಾರತದತ್ತ ಇಟ್ಟಿರುವ ಇನ್ನೊಂದು ಧೃಡ ಹೆಜ್ಜೆ: ಕ್ಯಾ. ಗಣೇಶ್ ಕಾರ್ಣಿಕ್

ಮಂಗಳೂರು: ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಮಂಡಿಸಿದ 9ನೇ ಬಜೆಟ್ ಮೋದಿಯವರ ಕನಸಿನ ವಿಕಸಿತ ಭಾರತದತ್ತ ಇಟ್ಟಿರುವ ಇನ್ನೊಂದು ಧೃಡ ಹೆಜ್ಜೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಪ್ರತಿಕ್ರಿಯಿಸಿದ್ದಾರೆ.

ಜಗತ್ತು ಆರ್ಥಿಕ ಅನಿಶ್ಚಿತತೆಯ ತಲ್ಲಣಗಳಲ್ಲಿ ಮುಳುಗಿರುವ ಈ ಸಂದರ್ಭದಲ್ಲಿ ದೇಶದ ಜನತಯ ಮನಸ್ಸಿನಲ್ಲಿ ಆರ್ಥಿಕ ವಿಶ್ವಾಸ ತುಂಬಿರುವ ಸ್ವಾಗತಾರ್ಹ ಬಜೆಟ್., ದೀರ್ಘಕಾಲೀನ ಆರ್ಥಿಕ ಗುರಿಯನ್ನು ಮುಟ್ಟಲು ಅಗತ್ಯವಿರುವ ಅಲ್ಪ ಕಾಲಿನ ಯೋಜನೆಗಳೊಂದಿಗೆ ಸಂತುಲನೆಯ ಸಮದೃಷ್ಟಿಯ ಸಂತುಲಿತ ಬಜೆಟ್. 

ಯಾವುದೇ ಸಮುದಾಯವನ್ನಾಗಲಿ, ಸಂಸ್ಥೆಯನ್ನಾಗಲಿ, ವರ್ಗವನ್ನಾಗಲಿ ತುಷ್ಟಿಕರಿಸುವ ಹಿಂದಿನ ಸರಕಾರಗಳ ಯೋಚನೆಗಳಿಗೆ ವಿರುದ್ಧವಾಗಿ, ಜಾಗತಿಕ ಆರ್ಥಿಕ ತಲ್ಲಣವನ್ನು ಗಮನದಲ್ಲಿರಿಸಿ ನಮ್ಮ ದೇಶದ ಜನತೆಯ ಭವಿಷ್ಯದ ಹಿತವನ್ನು ಕಾಪಾಡಲು ಅಗತ್ಯವಿರುವ ಯೋಚನೆ ಮತ್ತು ಯೋಜನೆಗಳನ್ನು ಹೊಂದಿರುವ ಬಜೆಟ್., ಜನತೆಯ ಆಶೋತ್ತರಗಳನ್ನು ಸಾಧಿಸಬಲ್ಲ ಯೋಜನೆಗಳು ಮತ್ತು ತುಷ್ಟೀಕರಣದ ಮಾನಸಿಕತೆಯಿಂದ ಹೊರಬಂದು ಜನಸಾಮಾನ್ಯರನ್ನು ಕೇಂದ್ರವಾಗಿರಿಸಿರುವ ಬಜೆಟ್ ಅಭಿನಂದನೀಯ.

ಮೂಲ ಭೂತ ಸೌಕರ್ಯಗಳು, ಕೃಷಿ, ಉದ್ಯೋಗ, ಸೆಮಿ ಕಂಡಕ್ಟರ್, ಪ್ರೆಶಿಯಸ್ ಲೋಹಗಳು, ಡೇಟಾ ಕೇಂದ್ರಗಳು ಮುಂತಾದ ಕ್ಷೇತ್ರಗಳಲ್ಲಿ ಸ್ವಾವಲಂಬನೆಯ ಯೋಜನೆಗಳ ಅಭಿವೃದ್ಧಿಗೆ ಪೂರಕ ಬಜೆಟ್ ಎಂದು ಕ್ಯಾ. ಗಣೇಶ್ ಕಾರ್ಣಿಕ್ ಪ್ರತಿಕ್ರಿಯಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article