ಜಿಲ್ಲಾ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಚಿದಂಬರ ಬೈಕಂಪಾಡಿ ಆಯ್ಕೆ

ಜಿಲ್ಲಾ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಚಿದಂಬರ ಬೈಕಂಪಾಡಿ ಆಯ್ಕೆ


ಮಂಗಳೂರು: ಮಾರ್ಚ್ 27 ಮತ್ತು 28ರಂದು ಬಂಟ್ವಾಳ ಬಿಸಿ ರೋಡ್‌ನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಹಾಗೂ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ. ಈ ಕುರಿತು ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿದಂಬರ ಬೈಕಂಪಾಡಿ ಅವರು ಪತ್ರಕರ್ತ ಹಾಗೂ ಲೇಖಕರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದು, ಮುಂಗಾರು ಹಾಗೂ ಕನ್ನಡಪ್ರಭ ಪತ್ರಿಕೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕನ್ನಡದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿರುವ ಅವರು ‘ಬೇಗುದಿ’, ‘ವಾಸ್ತವದ ಲೆಕ್ಕಾಚಾರ’, ‘ಕಪ್ಪು ಹುಡುಗ’ ಸೇರಿದಂತೆ ಹಲವು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ‘ತುಳು ಪ್ರೇಮಗೀತೆಗಳು’ ಅವರ ಧ್ವನಿ ಸುರುಳಿಯಾಗಿ ಹೊರಬಂದಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಅವರು ಸೇವೆ ಸಲ್ಲಿಸಿದ್ದಾರೆ. ‘ಇದು ಮುಂಗಾರು’ ಕೃತಿ ಪತ್ರಿಕೋದ್ಯಮ ಕುರಿತಾದ ಅವರ ಪ್ರಮುಖ ಕೃತಿಯಾಗಿದೆ. ಹಿರಿಯ ಪತ್ರಕರ್ತ ವಡ್ಡರ್ಸೆಯವರೊಂದಿಗೆ ಹತ್ತು ವರ್ಷಗಳ ಕಾಲ ಮುಂಗಾರು ಪತ್ರಿಕೆಯಲ್ಲಿ ಕರ್ತವ್ಯ ಸಲ್ಲಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article