ಮಾದಕ ವಸ್ತು ಮಾರಾಟಕ್ಕೆ ಯತ್ನ: ಮೂವರ ಬಂಧನ

ಮಾದಕ ವಸ್ತು ಮಾರಾಟಕ್ಕೆ ಯತ್ನ: ಮೂವರ ಬಂಧನ


ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬೆಂಗಳೂರು ನಗರದಿಂದ ಮಾದಕವಸ್ತು ಎಂಡಿಎಂಎ ಅನ್ನು ಖರೀದಿಸಿಕೊಂಡು ಮಾರಾಟ ಮಾಡಲು ಯತ್ನಿಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಂಗಳೂರಿನ ಉಳ್ಳಾಲದ ನಿವಾಸಿಗಳಾದ ಮುಸ್ತಫಾ ಸೀದಿಯಬ್ಬ (34), ಮೈಯದ್ದಿ (28), ಮೊಹಮ್ಮದ್ ಶಿಫಾನ್ (28) ಎಂದು ಗುರುತಿಸಲಾಗಿದೆ.

ಘಟನೆಯ ವಿವರ:

ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೂದು ಬಣ್ಣದ ಸ್ವೀಪ್ಟ್ ಕಾರಿನಲ್ಲಿ ಉಳ್ಳಾಲ ತಾಲೂಕಿನ ತಲಪಾಡಿಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಫೆ.12 ರಂದು ಮೂವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಧಿತರಿಂದ 11,90,000 ರೂ. ಮೌಲ್ಯದ 118.13 ಗ್ರಾಂ. ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಮೊಬೈಲ್ ಫೋನ್-4, KA-19-MQ-3420 ನೇ ನಂಬ್ರದ ಬೂದು ಬಣ್ಣದ ಸ್ವೀಪ್ಟ್ ಕಾರು ಸಹಿತ ಒಟ್ಟು 17,95,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಮುಸ್ತಫಾ ಸೀದಿಯಬ್ಬ ಎಂಬಾತನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article