ಬಜೆಟ್‌ನಲ್ಲಿ ಕರ್ನಾಟಕಕ್ಕೆ ಚೊಂಬು: ಮಂಜುನಾಥ ಭಂಡಾರಿ
Sunday, February 1, 2026
ಮಂಗಳೂರು: ಕೇಂದ್ರ ಸರ್ಕಾರದ ಬಜೆಟ್ ನಿರಾಶಾದಾಯಕವಾಗಿದೆ. ಯಾವುದೇ ದೂರದೃಷ್ಟಿಯಿಲ್ಲದ ಬಜೆಟ್ ಇದು. ವಿಕಸಿತ ಭಾರತ ಎಂದು ಬರೀ ಹೇಳಿಕೆಗಳಿಂದ ಕೂಡಿದ್ದು, ದೇಶದ ಸಾಮಾನ್ಯ ಜನತೆಗೆ ಮತ್ತೊಮ್ಮೆ ನಿರಾಶೆಯನ್ನುಂಟುಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪ್ರತಿಕ್ರಿಯಿಸಿದ್ದಾರೆ.
ಮೇಕೆದಾಟು ಯೋಜನೆಗೆ ಅನುಮತಿ ಇಲ್ಲ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನವಿಲ್ಲ.ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ರಾಜ್ಯಕ್ಕೆ ಕೇಂದ್ರ ಸರ್ಕಾರ ಚೊಂಬು ನೀಡಿದೆ. ಬಜೆಟ್‌ನಲ್ಲಿ ರೈತರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ಇಲ್ಲ. ದೇಶದ ಮಹಿಳೆಯರು, ರೈತರು ಹಾಗೂ ಯುವಜನತೆಯ ಭವಿಷ್ಯದ ಮೇಲೆ ನೇರವಾಗಿ ಸಕಾರಾತ್ಮಕ ಪರಿಣಾಮ ಬೀರುವ ಯಾವುದೇ ಗುಣಾತ್ಮಕ ಸಂಗತಿಗಳನ್ನು ಈ ಬಜೆಟ್ ಹೊಂದಿಲ್ಲ ಎಂದು ಮಂಜುನಾಥ ಭಂಡಾರಿ ಹೇಳಿದರು.