ಸಿಎಂ ಬದಲಾವಣೆ ಹೇಳಿಕೆ ಜನರಿಗೆ ಯಾವುದೇ ಉಪಯೋಗ ಇಲ್ಲ: ಡಾ.ಶರಣಪ್ರಕಾಶ್ ಪಾಟೀಲ್

ಸಿಎಂ ಬದಲಾವಣೆ ಹೇಳಿಕೆ ಜನರಿಗೆ ಯಾವುದೇ ಉಪಯೋಗ ಇಲ್ಲ: ಡಾ.ಶರಣಪ್ರಕಾಶ್ ಪಾಟೀಲ್

ಮಂಗಳೂರು: ರಾಜ್ಯದಲ್ಲಿ ಸಿ.ಎಂ ಬದಲಾವಣೆ ಚರ್ಚೆ ಕಳೆದ ಕೆಲವು ತಿಂಗಳಿನಿಂದ ನಡೆಯುತ್ತಿದೆ. ಎರಡು ಬಣಗಳ ನಾಯಕರು ಈ ಬಗ್ಗೆ ಹೇಳಿಕೆಗಳನ್ನು ನೀಡುತ್ತಲೇ ಇರುತ್ತಾರೆ. ಇದರಿಂದ ಜನರಿಗೆ ಯಾವುದೇ ಉಪಯೋಗ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನನ್ನದೊಂದು ಪಾಲಿಸಿ ಇದೆ. ನಾವು ಆಡುವ ಪ್ರತಿಯೊಂದು ಮಾತು ಸಾರ್ವಜನಿಕ ಹಿತಾಸಕ್ತಿಯಿಂದ ಇರಬೇಕು. ಮಾಡುವ ಕೆಲಸ ಸಾರ್ವಜನಿಕ ಹಿತಾಸಕ್ತಿಯಿಂದ ಇರಬೇಕು. ಹೀಗಾಗಿ ಜನರಿಗೆ ಉಪಯುಕ್ತವಾಗುವ ಮಾತನ್ನು ನಾನು ಆಡುತ್ತೇನೆ” ಎಂದರು.

ಕಲಬುರಗಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡುವುದುನ್ನು ಪ್ರಶ್ನಿಸಿ ತಡೆದಿದಕ್ಕೆ ಸಹಾಯಕ ಪ್ರಾಧ್ಯಾಪಕನ ಮೇಲೆ ಹಲ್ಲೆ ಮಾಡಿದ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಈ ರೀತಿ ಕೆಲ ಕಿಡಿಗೇಡಿ ವಿದ್ಯಾರ್ಥಿಗಳು ಮಾಡುತ್ತಾರೆ. ಅಂತವರ ಮೇಲೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತದೆ ಎಂದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article