‘ಮನೆರೇಗಾ ಬಚಾವೋ ಸಂಗ್ರಾಮ್’: ಮೂಲ್ಕಿಯಲ್ಲಿ ಸಮಾಪನ
ಕುಳೂರು ಗೋಲ್ಡ್ ಪಿಂಚ್ ಮೈದಾನದಿಂದ ಸುರತ್ಕಲ್‌ತನಕ ಅಬ್ಬರದಿಂದ ಪಾದಯಾತ್ರೆ ಸಾಗಿತು. ಸುರತ್ಕಲ್‌ನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಮುಂದಾಳತ್ವದಲ್ಲಿ ಸಾವಿರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡರು.
ಪಾದಯಾತ್ರೆಯ ಅಂತಿಮ ದಿನವಾದ ಇಂದು ಮಂಗಳೂರಿನ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಹೆಜ್ಜೆ ಹಾಕಿದರು. ಸುರತ್ಕಲ್‌ನ ಕುಲಾಲ ಭವನದಲ್ಲಿ ಜಮಾವಣೆಗೊಂಡ ಕಾರ್ಯಕರ್ತರಿಗೆ ಭೋಜನದ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಮೂಲ್ಕಿಯಲ್ಲಿ ಬೃಹತ್ ಸಮಾರೋಪ ಸಮಾರಂಭ ನಡೆದಿದೆ.
ರಾಹುಲ್ ಗಾಂಧಿ ಪ್ರಧಾನಿಯಾಗಲಿ..
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಇನಾಯತ್ ಅಲಿ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಮನ್ರೇಗಾ ಯೋಜನೆಯಿಂದ ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದುಹಾಕಿ ಅವರಿಗೆ ಅಪಮಾನ ಮಾಡಲಾಗಿದೆ. ಈ ಯೋಜನೆಯ ಬದಲಾವಣೆಯಿಂದ ಬಡವರಿಗೆ ಅನ್ಯಾಯವಾಗುತ್ತಿದೆ. ಇದು ಮರುಸ್ಥಾಪನೆಯಾಗುವವರೆಗೂ ನನ್ನ ಹೋರಾಟ ನಿಲ್ಲದು” ಎಂದು ಗುಡುಗಿದರು. ಇದೇ ವೇಳೆ ಮುಂಬರುವ ಲೋಕಸಭೆ ಚುನಾವಣೆಯ ಗುರಿಯನ್ನು ಸಾರಿದ ಅವರು, “೨೦೨೯ರಲ್ಲಿ ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡುವುದೇ ನಮ್ಮ ಏಕೈಕ ಗುರಿ. ನಮ್ಮ ಪ್ರತಿಯೊಂದು ಹೆಜ್ಜೆಯೂ ಅವರನ್ನು ದೇಶದ ಸರ್ವೋಚ್ಚ ಪೀಠದಲ್ಲಿ ಕೂರಿಸುವುದಕ್ಕಾಗಿಯೇ ಇರುತ್ತದೆ” ಎಂದು ಘೋಷಿಸಿದರು.