ಪಂಪ್ ವೆಲ್-ಕರಾವಳಿ ಜಂಕ್ಷನ್ ಚತುಷ್ಪತ ರಸ್ತೆ: ಶಾಸಕ ಕಾಮತ್ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ

ಪಂಪ್ ವೆಲ್-ಕರಾವಳಿ ಜಂಕ್ಷನ್ ಚತುಷ್ಪತ ರಸ್ತೆ: ಶಾಸಕ ಕಾಮತ್ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ


ಮಂಗಳೂರು: ಹಲವು ಸಮಯದ ನಂತರ ನಗರದ ಪಂಪ್‌ ವೆಲ್ ವೃತ್ತದಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಮರುಚಾಲನೆ ದೊರೆತಿದ್ದು, ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ, ಮೆಸ್ಕಾಂ, ಕೆಯುಎಫ್.ಡಿ.ಸಿ, ಪೊಲೀಸ್ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಸ್ಥಳ ಪರಿಶೀಲನೆ ನಡೆಸಿದರು.


ಬಳಿಕ ಅವರು ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ಸುಮಾರು 4 ಕೋಟಿ ಅನುದಾನವನ್ನು ಮಂಜೂರುಗೊಳಿಸಿ ಗುದ್ದಲಿ ಪೂಜೆಯನ್ನು ಸಹ ನೆರವೇರಿಸಲಾಗಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಎಲ್ಲಾ ಕಾಮಗಾರಿಗಳಿಗೆ ತಡೆ ನೀಡಿದ್ದರಿಂದ ಇಲ್ಲಿನ ರಸ್ತೆಯ ಅಭಿವೃದ್ಧಿಗೆ ಹಿನ್ನಡೆಯಾಗಿತ್ತು. ಪರಿಣಾಮ ಜನರು ಅನುಭವಿಸುತ್ತಿದ್ದ ಸಮಸ್ಯೆ ಬಗ್ಗೆ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿಯಾಗಿ ಹಲವು ಬಾರಿ ಮನವಿ ಮಾಡಿದ ಕಾರಣ ಇಂದು ಈ ಕಾಮಗಾರಿಗೆ ಮತ್ತೆ ಚಾಲನೆ ದೊರೆತಿದೆ ಎಂದರು.


ಈ ಸ್ಥಳವು ನಗರದ ಪ್ರಮುಖ ಭಾಗವಾಗಿದ್ದು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ, ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವುದು ಅಗತ್ಯವಾಗಿದೆ. ಹಾಗಾಗಿ ಎಲ್ಲರನ್ನು ಸ್ಥಳಕ್ಕೆ ಕರೆಯಿಸಿ ಕಾಮಗಾರಿಯ ಬಗ್ಗೆ ಹಲವು ಸೂಚನೆಗಳನ್ನು ನೀಡಲಾಗಿದೆ ಎಂದರು. 

ಈ ವೇಳೆ ನಿಕಟಪೂರ್ವ ಪಾಲಿಕೆ ಸದಸ್ಯರಾದ ಸಂದೀಪ್ ಗರೋಡಿ, ಅಧಿಕಾರಿಗಳಾದ, ಪ್ರೀತಂ, ಭವ್ಯ, ಹೇಮಂತ್, ಶರತ್ ಗೌಡ, ಖಾದರ್ ಪೊಲೀಸ್ ಅಧಿಕಾರಿಗಳಾದ ಕೃಷ್ಣಾನಂದ ನಾಯಕ್, ಗೋಪಾಲ ಕೃಷ್ಣ ಭಟ್, ಗುತ್ತಿಗೆದಾರರಾದ ಸುಧಾಕರ್ ಪೂಂಜಾ, ಮೊದಲಾದವರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article