ಗಲ್ಫ್ ನಲ್ಲಿ ಯುದ್ಧ: ವಿಮಾನ ಸಂಚಾರ ರದ್ದು

ಗಲ್ಫ್ ನಲ್ಲಿ ಯುದ್ಧ: ವಿಮಾನ ಸಂಚಾರ ರದ್ದು

ಮಂಗಳೂರು: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಬಳಿಕ ಮುಂಜಾಗ್ರತಾ ಕ್ರಮವಾಗಿ ಗಲ್ಫ್ ರಾಷ್ಟ್ರಗಳು ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಈ ಹಿನ್ನಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್‌ಗೆ ತೆರಳುವ, ಆಗಮಿಸುವ ವಿಮಾನಯಾನ ಸಂಚಾರಗಳು ರದ್ದಾಗಿವೆ.

ಇರಾನ್ ಮೇಲೆ ದಾಳಿ ಪ್ರಾರಂಭವಾಗುವ ಮುಂಚೆಯೇ ಮಂಗಳೂರಿನಿಂದ ದೋಹಾಕ್ಕೆ ತೆರಳಲು ಟೇಕಾಫ್ ಆಗಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಮುಂಬೈ ವಿಮಾನ ನಿಲ್ದಾಣದಲ್ಲಿ ರಾತ್ರಿ 7 ಗಂಟೆಗೆ ಲ್ಯಾಂಡ್ ಆಗಲಿದೆ.

ಮಧ್ಯಾಹ್ನ 1.20ಕ್ಕೆ ಮಂಗಳೂರಿನಿಂದ ದುಬೈಗೆ ಹೊರಡಬೇಕಿದ್ದ IX 831 IXE-DXB ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ರದ್ದುಗೊಳಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ರದ್ದುಗೊಳಿಸಿರುವುದನ್ನು ತಿಳಿಸಿತು. ವಿಮಾನದಲ್ಲಿ ತೆರಳಲು 174 ಪ್ರಯಾಣಿಕರು ಮತ್ತು 6 ಮಂದಿ ಸಿಬ್ಬಂದಿ ಸಿದ್ಧರಾಗಿದ್ದರು ಎಂದು ಮಂಗಳೂರು ವಿಮಾನ ನಿಲ್ದಾಣದ ಪ್ರಕಟನೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article