ದೈವದ ಪವಾಡ: ತನ್ನಿಂದ ತಾನೇ ತೂಗಿದ ದೈವದ ಉಯ್ಯಾಲೆ

ದೈವದ ಪವಾಡ: ತನ್ನಿಂದ ತಾನೇ ತೂಗಿದ ದೈವದ ಉಯ್ಯಾಲೆ

ಮಂಗಳೂರು: ಬೈಕಂಪಾಡಿ ಕೈಗಾರಿಕಾ ವಲಯದ ಕುಡುಂಬೂರು ನಡುಗಿರಿಯಲ್ಲಿರುವ ಶ್ರೀ ಜಾರಂದಾಯ ಹಾಗೂ ಸಹಪರಿವಾರ ದೈವಸ್ಥಾನದಲ್ಲಿ ನಡೆದ ಪಿಲಿಚಂಡಿ ದೈವದ ನೇಮೋತ್ಸವದ ವೇಳೆ ದೈವದ ಉಯ್ಯಾಲೆ ತನ್ನಿಂದ ತಾನೇ ತೂಗಿದ ದೃಶ್ಯ ಭಕ್ತರಲ್ಲಿ ಅಚ್ಚರಿ ಮೂಡಿಸಿದೆ. 

ನೇಮೋತ್ಸವದ ಸಂದರ್ಭದಲ್ಲಿ ಪಿಲಿಚಂಡಿ ದೈವಕ್ಕೆ ಗಗ್ಗರ ಇಡುವಾಗ ದೈವಸ್ಥಾನ ಪ್ರದೇಶದಲ್ಲಿ ಏಕಾಏಕಿ ದೊಡ್ಡ ಸದ್ದು ಕೇಳಿಬಂದಿದ್ದು, ಸಿಡಿತದಂತಿದ್ದ ಶಬ್ದದಿಂದ ಅಲ್ಲಿದ್ದವರು ಕ್ಷಣಕಾಲ ಆತಂಕಗೊಂಡರು. ಬಳಿಕ ನೋಡಿದಾಗ ನೇಮೋತ್ಸವ ನಡೆಯುತ್ತಿದ್ದ ಸ್ಥಳದ ಮುಂಭಾಗದಲ್ಲಿರುವ ಹೊಳ್ಳರ ಚಾವಡಿಯಲ್ಲಿದ್ದ ದೈವದ ತೂಗುಯ್ಯಾಲೆ ತನ್ನಿಂದ ತಾನೇ ತೂಗುತ್ತಿರುವುದು ಕಂಡು ಭಕ್ತರು ಅಚ್ಚರಿಗೊಳಗಾದರು. ಉಯ್ಯಾಲೆ ರೀತಿಯ ದೈವದ ಮಂಚದಲ್ಲಿ ಪಿಲಿಚಂಡಿ ದೈವ ತನ್ನ ಕಾರಣಿಕ ಶಕ್ತಿಯನ್ನು ಪ್ರದರ್ಶಿಸಿದೆ ಎಂದು ಭಕ್ತರು ನಂಬಿಕೆ ವ್ಯಕ್ತಪಡಿಸಿದ್ದಾರೆ. 

ನೇಮೋತ್ಸವದ ಸಂದರ್ಭದಲ್ಲಿ ನಡೆದ ಈ ಘಟನೆಗೆ ಸಾಕ್ಷಿಯಾದ ಭಕ್ತರು, ದೈವ ಪವಾಡವನ್ನು ಕಣ್ಣಾರೆ ಕಂಡ ಅನುಭವವನ್ನು ಹಂಚಿಕೊಂಡಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಗಳಿಂದಲೂ ಭಕ್ತರು ದೈವಸ್ಥಾನಕ್ಕೆ ಹರಿದುಬಂದಿದ್ದು, ದೈವದ ಕಾರ್ಣಿಕ ಕಂಡು ಪುಳಕಿತರಾಗಿದ್ದಾರೆ. ಕರಾವಳಿ ಭಾಗದಲ್ಲಿ ದೈವ ನೇಮೋತ್ಸವಗಳ ವೇಳೆ ಇಂತಹ ಅಚ್ಚರಿಯ ಘಟನೆಗಳು ನಡೆದಿರುವ ಉದಾಹರಣೆಗಳು ಇದಕ್ಕೂ ಮೊದಲು ನಡೆದಿವೆ. ಪಿಲಿಚಂಡಿ ದೈವದ ಈ ಪವಾಡ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article