ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ವಿಶೇಷ ಅನುದಾನ ನೀಡುವಂತೆ ಮನವಿ

ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ವಿಶೇಷ ಅನುದಾನ ನೀಡುವಂತೆ ಮನವಿ


ಮಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸುಮಾರು 800 ವರ್ಷಗಳಿಗೂ ಹಿಂದೆ ಪ್ರತಿಷ್ಠಾಪಿಸಲ್ಪಟ್ಟ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮೂರ್ತಿ ಒಂದು ಐತಿಹಾಸಿಕ ಇತಿಹಾಸವಾಗಿದೆ. ಇಂತಹ ಅದ್ಭುತ ಶಿಲಾಮೂರ್ತಿಗೆ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ 2027ರ ಫೆಬ್ರವರಿಯಲ್ಲಿ ನಡೆಯಲಿದೆ.

ಈ ಧಾರ್ಮಿಕ ನೆಲೆಯ ಮಹಾಮಸ್ತಕಾಭಿಷೇಕ ಮಹೋತ್ಸವವನ್ನು ಅತ್ಯಂತ ಅದ್ದೂರಿಯಲ್ಲಿ ನಡೆಸಲು ಕಾರ್ಕಳ ಭಗವಾನ್ ಶ್ರಿ ಬಾಹುಬಲಿ ಸ್ವಾಮಿ ಮಹಾಮಸ್ತಾಕಾಭಿಷೇಕ ಸಮಿತಿ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕಾರ್ಕಳ ನಗರಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವಿಶೇಷ ಅನುದಾನವನ್ನು ಕರ್ನಾಟಕ ಸರಕಾರದ ವತಿಯಿಂದ ಬಿಡುಗಡೆಗೊಳಿಸುವ ಬಗ್ಗೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರಿಗೆ ಸಮಿತಿಯ ಕಾರ್ಯಾಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಬೆಂಗಳೂರಿನಲ್ಲಿ ಮಂಗಳವಾರ ಮನವಿಯನ್ನು ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ವೃಷಭ ದೇವ ಅಧಿಕಾರಿ ವರಂಗ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article