ಕಳ್ಳತನ ಮಾಡಿದ ಆರೋಪಿಯ ಬಂಧನ
ಬಂಧಿತನನ್ನು ಮಂಗಳೂರಿನ ಜಪ್ಪು ಗುಜ್ಜರಕೆರೆ ನಿವಾಸಿ ಝಾಕೀರ್ ಹುಸೈನ್ ಯಾನೆ ಜಾಕಿ (38) ಎಂದು ತಿಳಿದುಬಂದಿದೆ.
ಬಂಧಿತ ಆರೋಪಿಯಿಂದ ಕಳವು ಮಾಡಿದ ನಗದು ಹಣ 70,000 ರೂ., ಕೃತ್ಯಕ್ಕೆ ಬಳಸಿದ ದ್ವಿಚಕ್ರವಾಹನ, ಕಳ್ಳತನದ ಹಣದಿಂದ ಖರೀದಿಸಿದ ವಿವೋ ಕಂಪನಿಯ ಮೊಬೈಲ್ ಪೋನ್‌ನ್ನು ಸ್ವಾಧೀನಪಡಿಸಲಾಗಿದೆ.
ಘಟನೆಯ ವಿವರ:
ಮಹಮ್ಮದ್ ನಿಜಾಮುದ್ದಿನ್ ಎಂಬವರು ಫೆ.7 ರಂದು ಶ್ರೀಧರ ಆಳ್ವರವರಿಗೆ ಸೇರಿದ ಅಡಿಕೆಯನ್ನು ಕೆಎ-19-ಂಇ-8663 ನೇ ಟಾಟಾ ಇಂಟ್ರಾ ವಾಹನದಲ್ಲಿ ತುಂಬಿಸಿಕೊಂಡು ಬೀಭಿ ಅಲಾಬಿಯಲ್ಲಿರುವ ಅಂಬಾರ ಸುಪಾರಿ ಅಂಗಡಿಗೆ ಮಾರಾಟ ಮಾಡಿ ಅವರು ನೀಡಿದ 1,28,740 ರೂ.ವನ್ನು ತನ್ನ ವಾಹನದ ಡ್ಯಾಶ್ ಬೋರ್ಡ್ ನಲ್ಲಿಟ್ಟು, ವಾಹನವನ್ನು ಚಲಾಯಿಸಿಕೊಂಡು 10.30 ಗಂಟೆಗೆ ಬಂದರ್‌ನ ಜೆ.ಎಂ. ರೋಡ್‌ನಲ್ಲಿರುವ ಸದರ್ನ್ ಏಜೆನ್ಸಿಯಲ್ಲಿ ಎಸಿಪಿ ಶೀಟ್ ಖರೀದಿ ಮಾಡಿ ವಾಹನದಲ್ಲಿ ಕುಳಿತು ಡ್ಯಾಶ್ ಬೋರ್ಡ್ ತೆರೆದಿದ್ದು, ಅದರಲ್ಲಿಟ್ಟಿದ್ದ 1,28,740 ರೂ. ಹಣ ಕಳ್ಳತನವಾಗಿರುವುದು ಕಂಡು ಬಂದಿದ್ದು, ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯನ್ನು ಫೆ.8 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಆರೋಪಿತನ ವಿರುದ್ಧ ಈ ಹಿಂದೆಯೇ ಉಡುಪಿ ಜಿಲ್ಲೆಯ ಕುಂದಾಪುರ ಪೊಲೀಸ್ ಠಾಣೆಯಲ್ಲಿ ರಾತ್ರಿ ಮನೆ ಕಳವು ಪ್ರಕರಣದಲ್ಲಿ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ವ್ಯಾಪ್ತಿಯಲ್ಲಿ ಅಟೋರಿಕ್ಷಾದ ಶೀಟ್ ನಲ್ಲಿ ಇಟ್ಟಿದ ನಗದು ಹಣವನ್ನು ಕಳವು ಮಾಡಿದ ಪ್ರಕರಣ ದಾಖಲಾಗಿದೆ.