ಶಾಸಕರ ಪತ್ನಿ ನಿಂದನೆ: ಆರೋಪಿ ಬಂಧನ

ಶಾಸಕರ ಪತ್ನಿ ನಿಂದನೆ: ಆರೋಪಿ ಬಂಧನ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಸದಸ್ಯ ಡಿ. ವೇದವ್ಯಾಸ ಕಾಮತ್ ಅವರ ಪತ್ನಿಯನ್ನು ನಿಂದಿಸಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಬಂಟ್ವಾಳ ತಾಲೂಕಿನ ಶರಣ್ ರೈ(29) ಎಂಬಾತನನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ

ಶರಣ್ ರೈ ಅಮ್ಟಾಡಿ ನಿವಾಸಿಯಾಗಿದ್ದು ರಿಯಲ್ ಎಸ್ಟೇಟ್ ಕೆಲಸ ಮಾಡಿಕೊಂಡಿದ್ದಾನೆ. ಆರೋಪಿ ಫೇಸ್‌ಬುಕ್‌ನಲ್ಲಿ ಶಾಸಕ ವೇದವ್ಯಾಸ ಕಾಮತ್ ಪತ್ನಿಯನ್ನು ಅವಮಾನಿಸುವ ರೀತಿ ಪೋಸ್ಟ್ ಮಾಡಿದ್ದು ಈ ಬಗ್ಗೆ ಮಹಿಳೆಯೊಬ್ಬರು ಉತ್ತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 

ಇಂತಹ ಹೇಳಿಕೆಯಿಂದ ಗೃಹಿಣಿಯಾಗಿರುವ ಶಾಸಕರ ಪತ್ನಿಯ ಬಗ್ಗೆ ಸಮಾಜದಲ್ಲಿ ಅಗೌರವ ಉಂಟಾಗಿದೆ, ಮಹಿಳೆಯರ ಬಗ್ಗೆ ಕೀಳು ಅಭಿರುಚಿಯಿಂದ ಪೋಸ್ಟ್ ಮಾಡಿದ್ದಾಗಿದೆ ಎಂಬ ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಯು ಅರಸೀಕೆರೆ ಶಾಸಕ ಕೆ. ಎಂ. ಶಿವಲಿಂಗೇಗೌಡ ಮೊನ್ನೆ ನಡೆದ ಸದನದಲ್ಲಿ ಆಡಿದ ಮಾತನ್ನು ಕೂಡಾ ಉಲ್ಲೇಖಿಸಿದ್ದಾನೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article