ಕಾರಿನಲ್ಲಿ ಗಾಂಜಾ ಸಾಗಾಟ: ಬಂಧನ, ಗಾಂಜಾ ವಶಕ್ಕೆ
Saturday, February 7, 2026
ಮಂಗಳೂರು: ಕಾರಿನಲ್ಲಿ ಗಾಂಜಾ ತುಂಬಿಸಿಕೊಂಡು ಮಾರಾಟ ಮಾಡಲು ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಮುಡಿಪು ಬಳಿ ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ನೌಶಾದ್ ಮತ್ತು ಇಬ್ರಾಹಿಂ ಎಂದು ಗುರುತಿಸಲಾಗಿದೆ.
ಆರೋಪಿಗಳು ಮೇಲ್ಕಾರ್-ಸಜೀಪ -ಬೋಳಿಯಾರು ಮಾರ್ಗವಾಗಿ ಗಾಂಜಾದ ಕಟ್ಟುಗಳನ್ನು ತೆಗೆದುಕೊಂಡು ಮುಡಿಪು ಮತ್ತು ಕೇರಳ ರಾಜ್ಯಕ್ಕೆ ಮಾರಾಟ ಮಾಡಲು ತರುತ್ತಿದ್ದಾರೆಂದು ಮಾಹಿತಿ ಬಂದ ಹಿನ್ನೆಲೆಯಲ್ಲಿ ಕೊಣಾಜೆ ಪೊಲೀಸರು ಕುರ್ನಾಡು ಗ್ರಾಮದ ಮಿತ್ತಕೋಡಿ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಆರೋಪಿಗಳು ಪರಾರಿಗೆ ಯತ್ನಿಸಿದಾಗ ಅವರನ್ನು ವಶಕ್ಕೆ ಪಡೆದ ಪೊಲೀಸರು ಅವರ ಬಳಿ ಇದ್ದ ಸುಮಾರು 80 ಕೆಜಿ ಗಾಂಜಾ ಹಾಗೂ ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರು, 3 ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.