ವೆನ್ಲಾಕ್ ಆಸ್ಪತ್ರೆಗೆ ರಾಜ್ಯ ಮಾನವ ಹಕ್ಕುಗಳ ಆಯೋಗ ಭೇಟಿ
Wednesday, February 18, 2026
ಮಂಗಳೂರು: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಂ ಭಟ್ ಹಾಗೂ ಸದಸ್ಯ ಎಸ್.ಕೆ ವೆಂಟಗೋಡಿ ಅವರು ವೆನ್ಲಾಕ್ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದರು.
ಆಸ್ಪತ್ರೆಯ ವಾರ್ಡ್ ಹಾಗೂ ಆಸ್ಪತ್ರೆ ಇನ್ನಿತರ ವಿಭಾಗಗಳಿಗೆ ಭೇಟಿ ನೀಡಿ ರೋಗಿಗಳೊಂದಿಗೆ ಸಮಾಲೋಚನೆ ನಡೆಸಿದರು. ರೋಗಿಗಳು ಚಿಕಿತ್ಸೆಯ ಬಗ್ಗೆ ಯಾವುದೇ ದೂರು ವ್ಯಕ್ತಪಡಿಸಿರುವುದಿಲ್ಲ ಒಟ್ಟಾರೆಯಾಗಿ ಜಿಲ್ಲಾ ಆಸ್ಪತ್ರೆಯ ಭೇಟಿಯು ತೃಪ್ತಿದಾಯಕವಾಗಿತ್ತು ಎಂದು ಅವರು ತಿಳಿಸಿದ್ದಾರೆ.