ರೈಲಿನಿಂದ ಬಿದ್ದು ಕಬಡ್ಡಿ ಆಟಗಾರ ಸಾವು

ರೈಲಿನಿಂದ ಬಿದ್ದು ಕಬಡ್ಡಿ ಆಟಗಾರ ಸಾವು


ಮಂಗಳೂರು: ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25) ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. 

ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್‌ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ.

ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು. ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕ ಕುಂಞಣ್ಣ ನಾಯ್ಕ್ ಪುತ್ರ. ತಂದೆ, ತಾಯಿ, ಓರ್ವ ಸಹೋದರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇಂದು ರಾತ್ರಿ  ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article