ಮಕ್ಕಳ ಅಪಹರಣ ಹೇಳಿಕೆ: ಸುಳ್ಳು

ಮಕ್ಕಳ ಅಪಹರಣ ಹೇಳಿಕೆ: ಸುಳ್ಳು

ಮಂಗಳೂರು: ನಗರದ ಕುಂಟಿಕಾನ ಪರಿಸರದಲ್ಲಿ ಶಾಲಾ ಮಕ್ಕಳ ಅಪಹರಣ ನಡೆಯುತ್ತಿದೆ ಎಂಬ ಆಧಾರರಹಿತ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ವಾಟ್ಸಾಪ್ ಸೇರಿದಂತೆ ವಿವಿಧೆಡೆ ಹರಡುತ್ತಿದ್ದ ಧ್ವನಿ ಸಂದೇಶದ ಕುರಿತು ಪೊಲೀಸರು ತೀವ್ರ ತನಿಖೆ ನಡೆಸಿದ್ದು, ಈ ಕೆಳಗಿನ ಸತ್ಯಾಂಶಗಳನ್ನು ಕಮಿಷನರ್ ಬಿಡುಗಡೆ ಮಾಡಿದ್ದಾರೆ. ಯಾವುದೇ ದೂರು ದಾಖಲಾಗಿಲ್ಲ, ಮಂಗಳೂರು ನಗರದ ಯಾವುದೇ ಭಾಗದಲ್ಲಿ ಮಕ್ಕಳ ನಾಪತ್ತೆ ಕುರಿತು ಯಾವುದೇ ಅಧಿಕೃತ ದೂರುಗಳು ದಾಖಲಾಗಿಲ್ಲ. ಆಡಿಯೋ ಹಿಂದಿನ ಸತ್ಯ:

ವಾಯ್ಸ್ ಮೆಸೇಜ್ ಹರಿಬಿಟ್ಟಿದ್ದ ಮಹಿಳೆಯನ್ನು ಪೊಲೀಸರು ಪತ್ತೆಹಚ್ಚಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆಕೆ, “ರಸ್ತೆಯಲ್ಲಿ ಕೆಲವು ವಿದ್ಯಾರ್ಥಿಗಳು ಮಾತನಾಡಿಕೊಳ್ಳುತ್ತಿದ್ದ ವಿಷಯವನ್ನು ಕೇಳಿಸಿಕೊಂಡು ನಾನು ಈ ಆಡಿಯೋ ಮಾಡಿದ್ದೆ” ಎಂದು ಹೇಳಿಕೆ ನೀಡಿದ್ದಾರೆ. ಅಂದರೆ, ಆಕೆ ಘಟನೆಯನ್ನು ಪ್ರತ್ಯಕ್ಷವಾಗಿ ಕಂಡಿಲ್ಲ, ಬದಲಿಗೆ ಕೇವಲ ಕೇಳಿಬಂದ ಮಾತಿನ ಆಧಾರದ ಮೇಲೆ ಆಡಿಯೋ ಹಂಚಿಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article