ಮೆಸ್ಕಾಂ: ರಜಾ ದಿನವೂ ತೆರೆದಯಲಿದೆ ನಗದು ಕೌಂಟರ್
Friday, February 27, 2026
ಮಂಗಳೂರು: ಗ್ರಾಹಕರಿಗೆ ವಿದ್ಯುತ್ ಬಿಲ್‌ಗಳನ್ನು ಪಾವತಿಸಲು ಅನುಕೂಲವಾಗುವಂತೆ ಸಾರ್ವತ್ರಿಕ ರಜಾ ದಿನವಾದ ಫೆ.28 ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಮೆಸ್ಕಾಂನ ಎಲ್ಲಾ ನಗದು ಕೌಂಟರ್ಗಳನ್ನು ತೆರೆದಿಡಲು ಕ್ರಮ ಕೈಗೊಳ್ಳಲಾಗಿದೆ. ಆದುದರಿಂದ ಗ್ರಾಹಕರು ಸೌಲಭ್ಯದ ಸದುಪಯೋಗಪಡಿಸಿಕೊಂಡು ವಿದ್ಯುತ್ ಬಿಲ್‌ಗಳನ್ನು ಪಾವತಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.