ನಾಳೆ ವಳಚ್ಚಿಲ್ ಎಕ್ಸ್‌ಪರ್ಟ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ನಾಳೆ ವಳಚ್ಚಿಲ್ ಎಕ್ಸ್‌ಪರ್ಟ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಮಂಗಳೂರು: ವಳಚ್ಚಿಲ್ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಫೆ.4ರಂದು ಬೆಳಗ್ಗೆ ರಕ್ತದಾನ ಶಿಬಿರ ನಡೆಯಲಿದೆ.

ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಅವರು ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಉದ್ಘಾಟಿಸುವರು. ಅತ್ತಾವರ ಕೆ.ಎಂ.ಸಿ. ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಂಜಿತಾ ರಾವ್ ರಕ್ತದಾನದ ಕುರಿತು ಮಾತನಾಡುವರು. 

ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್ ನಾಯಕ್, ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಮಾಹಿತಿ ತಂತ್ರಜ್ಞಾನ ನಿರ್ದೇಶಕ ಅಂಕುಶ್ ಎನ್. ನಾಯಕ್, ಪ್ರಾಂಶುಪಾಲ ಡಾ. ಎನ್.ಕೆ. ವಿಜಯನ್ ಕರಿಪ್ಪಾಲ್ ಉಪಸ್ಥಿತರಿರುವರು.

ರಕ್ತದಾನ ಮಾಡಲಿಚ್ಛಿಸುವ ಸಾರ್ವಜನಿಕರು 8073214569 ಮೊಬೈಲ್ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article