ರಸ್ತೆ ಅಗಲೀಕರಣಕ್ಕೆ ಶಾಸಕ ಭರತ್ ಶೆಟ್ಟಿ ಶಂಕು ಸ್ಥಾಪನೆ

ರಸ್ತೆ ಅಗಲೀಕರಣಕ್ಕೆ ಶಾಸಕ ಭರತ್ ಶೆಟ್ಟಿ ಶಂಕು ಸ್ಥಾಪನೆ


ಮಂಗಳೂರು: ಲೋಕೋಪಯೋಗಿ ಇಲಾಖೆಯ ವತಿಯಿಂದ ಮಂಗಳೂರು ತಾಲೂಕಿನ ಮೂರ್ಜೆ ನಿಡ್ಡೋಡಿ ರಾಜ್ಯ ಹೆದ್ದಾರಿ ರಸ್ತೆಯ ಕಿ.ಮಿ 26.20 ರಿಂದ 27.40 ರವರೆಗೆ ಆಯ್ದ ಭಾಗದಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ನಡೆಯಲಿರುವ ರಸ್ತೆ ಅಗಲೀಕರಣದ ಶಂಕು ಸ್ಥಾಪನಾ ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರದ ಶಾಸಕ ಡಾ. ವೈ. ಭರತ್ ಶೆಟ್ಟಿ ನೆರವೇರಿಸಿದರು.


ಮುತ್ತೂರು ಪಂಚಾಯತ್ ಅಧ್ಯಕ್ಷ ಪ್ರವೀಣ್ ಆಳ್ವ ಗುಂಡ್ಯ, ಉಪಾಧ್ಯಕ್ಷೆ ಸುಷ್ಮಾ, ಸದಸ್ಯರಾದ ರುಕ್ಮಿಣಿ, ವನಿತಾ, ಮಾಲತಿ, ಶಶಿಕಲಾ, ತಾರಾನಾಥ ಕುಲಾಲ್, ಥೋಮಸ್ ಹೆರಾಲ್ಡ್ ರೋಜಾರಿಯೋ, ಜಗದೀಶ್ ದುರ್ಗಾಕೊಡಿ, ಎಡಪದವು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಹಾಬಲ ಸಾಲ್ಯಾನ್, ಕೊಳವೂರು ಮತ್ತು ಮುತ್ತೂರು ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article