ಡಾ. ಸಿಎ. ಎ. ರಾಘವೇಂದ್ರ  ನಿಧನ: ವಿಶ್ವ ಹಿಂದೂ ಪರಿಷದ್ ಸಂತಾಪ

ಡಾ. ಸಿಎ. ಎ. ರಾಘವೇಂದ್ರ ನಿಧನ: ವಿಶ್ವ ಹಿಂದೂ ಪರಿಷದ್ ಸಂತಾಪ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌‌ನ ಸ್ಥಾಪಕ ಅಧ್ಯಕ್ಷರು ಹಾಗೂ ಶ್ರೀನಿವಾಸ ವಿಶ್ವವಿದ್ಯಾನಿಲಯದ‌ ಕುಲಾಧಿಪತಿಗಳಾಗಿದ್ದ ಖ್ಯಾತ ಶಿಕ್ಷಣ ತಜ್ಞ ಡಾ. ಸಿಎ ಎ. ರಾಘವೇಂದ್ರ ರಾವ್ ರವರ ನಿಧನದಿಂದ ಕರಾವಳಿಯ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾದರ ನಷ್ಟ, 1988ರಲ್ಲಿ ಎ. ಶಾಮ್ ರಾವ್ ಪ್ರತಿಷ್ಠಾನವನ್ನು ಸ್ಥಾಪಿಸಿದ ಡಾ. ಸಿ.ಎ. ಎ. ರಾಘವೇಂದ್ರ ರಾವ್ ಅವರು, ಶ್ರೀನಿವಾಸ್ ಗ್ರೂಪ್ ಆಫ್ ಕಾಲೇಜುಗಳು ರಾಜ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಾಗಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 

 ಶಿಸ್ತು, ಮೌಲ್ಯಾಧಾರಿತ ಶಿಕ್ಷಣ ಮತ್ತು ಸೇವಾಭಾವನೆಗೆ ಹೆಸರಾಗಿದ್ದ ಡಾ. ರಾವ್, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಮಾರ್ಗದರ್ಶಕರಾಗಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಆದರ್ಶಪ್ರಾಯರಾಗಿದ್ದರು. 

ಡಾ. ಸಿಎ ಎ. ರಾಘವೇಂದ್ರ ರಾವ್ ರವರ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ, ಅವರ ಕುಟುಂಬಕ್ಕೆ, ಬಂಧು, ಹಿತೈಷಿಗಳಿಗೆ, ಅಪಾರ ಸಂಖ್ಯೆಯ ವಿದ್ಯಾರ್ಥಿಗಳಿಗೆ ಭಗವಂತ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಮತ್ತು ವಿಶ್ವ ಹಿಂದೂ ಪರಿಷದ್ ಪ್ರಾಂತ ಪ್ರಮುಖರಾದ ಡಾ. ಎಂ.ಬಿ. ಪುರಾಣಿಕ್ ಸಂತಾಪ ಸೂಚಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article