ಫೆ.11 ರಂದು ರೋಟರಿ ಜಿಲ್ಲಾ ಗವನ೯ರ್ ಮೂಡುಬಿದಿರೆಗೆ ಅಧಿಕೃತ ಭೇಟಿ

ಫೆ.11 ರಂದು ರೋಟರಿ ಜಿಲ್ಲಾ ಗವನ೯ರ್ ಮೂಡುಬಿದಿರೆಗೆ ಅಧಿಕೃತ ಭೇಟಿ


ಮೂಡುಬಿದಿರೆ: ಫೆಬ್ರವರಿ 11ರಂದು ರೋಟರಿ ಇಂಟರ್‌ನ್ಯಾಷನಲ್ ಜಿಲ್ಲೆ 3181ರ ಜಿಲ್ಲಾ ಗವರ್ನರ್‌ ರಾಮಕೃಷ್ಣ ಪಿ.ಕೆ. ಅವರು ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಈ ಭೇಟಿ ರೋಟರಿ ವರ್ಷದ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿದ್ದು, ಜಿಲ್ಲಾ ಮಟ್ಟದ ನಾಯಕತ್ವ ಹಾಗೂ ಸ್ಥಳೀಯ ಕ್ಲಬ್ ನಡುವಿನ ಸಮನ್ವಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಿದೆ ಎಂದು ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್ ಅಧ್ಯಕ್ಷ ಹರೀಶ್ ಎಂ.ಕೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಭೇಟಿಯ ಸಂದರ್ಭದಲ್ಲಿ ಜಿಲ್ಲಾ ಗವರ್ನರ್‌ ಅವರು ಕ್ಲಬ್‌ನ ಅಧ್ಯಕ್ಷರು, ಆಡಳಿತ ಮಂಡಳಿ ಹಾಗೂ ಎಲ್ಲಾ ಸದಸ್ಯರೊಂದಿಗೆ ವಿಶೇಷ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಕ್ಲಬ್ ಇದುವರೆಗೆ ಕೈಗೊಂಡಿರುವ ಸೇವಾ ಯೋಜನೆಗಳ ಪ್ರಗತಿ, ಸಮಾಜಕ್ಕೆ ಉಂಟಾದ ಪ್ರಯೋಜನಗಳು ಹಾಗೂ ಭವಿಷ್ಯದ ಕಾರ್ಯಯೋಜನೆಗಳ ಕುರಿತು ವಿಸ್ತೃತ ಚರ್ಚೆ ನಡೆಯಲಿದೆ. ರೋಟರಿ ಇಂಟರ್‌ನ್ಯಾಷನಲ್‌ ಈ ವರ್ಷದ ಸೇವಾ ಆದ್ಯತೆಗಳಾದ ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ, ಯುವ ಸಬಲೀಕರಣ ಹಾಗೂ ಸಮುದಾಯ ಅಭಿವೃದ್ಧಿ ಕುರಿತಂತೆ ಮಾರ್ಗದರ್ಶನ ನೀಡಲಿದ್ದಾರೆ ಎಂದರು.

ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ಕಳೆದ ಹತ್ತು ವರ್ಷಗಳಿಂದ ಮೂಡುಬಿದಿರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೇವಾ ಮನೋಭಾವದೊಂದಿಗೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಆರೋಗ್ಯ ಶಿಬಿರಗಳು ಹಾಗೂ ಉಚಿತ ಚಿಕಿತ್ಸೆಗಳ ಮೂಲಕ ಅನೇಕ ಬಡ ಕುಟುಂಬಗಳಿಗೆ ನೆರವು ನೀಡಿದೆ.

ವಿದ್ಯಾರ್ಥಿಗಳಿಗೆ ಶಿಕ್ಷಣ ಸಹಾಯ, ಪುಸ್ತಕ ವಿತರಣೆ ಹಾಗೂ ವಿದ್ಯಾರ್ಥಿವೇತನ ಒದಗಿಸಿ ಅವರ ಭವಿಷ್ಯ ನಿರ್ಮಾಣಕ್ಕೆ ಬೆಂಬಲ ನೀಡಿದೆ.ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಸ್ವಾವಲಂಬನೆಗೆ ಉತ್ತೇಜನ ನೀಡಿದೆ.ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ವೃಕ್ಷಾರೋಪಣ ಹಾಗೂ ಸ್ವಚ್ಛತಾ ಅಭಿಯಾನಗಳನ್ನು ಆಯೋಜಿಸಿದೆ. ಯುವಜನರಲ್ಲಿ ನಾಯಕತ್ವ ಗುಣ ಬೆಳೆಸಲು ವಿವಿಧ ತರಬೇತಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಿದೆ.

ಕ್ಲಬ್ ತನ್ನ ನಿರಂತರ ಸೇವಾ ಕಾರ್ಯಗಳ ಮೂಲಕ ಸಮಾಜದಲ್ಲಿ ವಿಶ್ವಾಸ ಹಾಗೂ ಗೌರವವನ್ನು ಗಳಿಸಿದೆ ಎಂದು ಹರೀಶ್ ಎಂ.ಕೆ ಮಾಹಿತಿ ನೀಡಿದರು.

ಜಿಲ್ಲಾ ಸಹಾಯಕ ಗವರ್ನರ್ ಉಮೇಶ್ ರಾವ್, ನಿಯೋಜಿತ ಅಧ್ಯಕ್ಷ ಡೆನ್ನಿಸ್ ಪಿರೇರಾ, ಪೂರ್ವ ಅಧ್ಯಕ್ಷ ಪೂರ್ಣಚಂದ್ರ ಜೈನ್, ಕಾರ್ಯದರ್ಶಿ ಭರತ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article