ಸ್ಪೆಷಲ್ ಒಲoಪಿಕ್ಸ್ ಭಾರತ್ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಸ್ಪೂತಿ೯ ಶಾಲೆಯ ಸಹಳಾಗೆ 2 ಚಿನ್ನ,1 ಕಂಚು
Saturday, February 7, 2026
ಮೂಡುಬಿದಿರೆ: ಹರಿಯಾಣದ ಮಹರ್ಷಿ ದಯಾನಂದ ವಿಶ್ವವಿದ್ಯಾನಿಲಯದಲ್ಲಿ ನಡೆದ ಸ್ಪೆಷಲ್ ಒಲಿಂಪಿಕ್ಸ್ ಭಾರತ್ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲೂಕಿನ ಬೆಳುವಾಯಿ ಸ್ಪೂತಿ೯ ವಿಶೇಷ ಮಕ್ಕಳ ಶಾಲೆಯ ವಿದ್ಯಾರ್ಥಿನಿ ಸಹಳಾ ಜೂನಿಯರ್ ವಿಭಾಗದಲ್ಲಿ ಶಾಟ್ ಪುಟ್ ಹಾಗೂ 4×100 ಮೀ ಮಿಕ್ಷೆಡ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಿಯಾಗಿ 2 ಚಿನ್ನದ ಪದಕ ಹಾಗೂ 200 ಮೀ ಓಟದಲ್ಲಿ ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಪಡೆದಿದ್ದಾರೆ.
ಇವರ ಸಾಧನೆಗೆ ಸ್ಪೂತಿ೯ ಸಂಸ್ಥೆಯ ಸ್ಥಾಪಕಾಧ್ಯಕ್ಷ ಪ್ರಕಾಶ್ ಜೆ. ಶೆಟ್ಟಿಗಾರ್ ಮತ್ತು ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.