ಅಂತರ ವಿಶ್ವವಿದ್ಯಾಲಯ ಸಾಫ್ಟ್‌ಬಾಲ್‌ಗೆ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನ ಐವರು ಆಯ್ಕೆ
Friday, February 6, 2026
ಮೂಡುಬಿದಿರೆ: ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಸಾಫ್ಟ್‌ಬಾಲ್ ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲು ಶ್ರೀ ಮಹಾವೀರ ಕಾಲೇಜಿನ ಐವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಮಹಾರಾಷ್ಟ್ರದ ಅಮರಾವತಿ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಅಂತರ ವಿಶ್ವವಿದ್ಯಾಲಯ ಸಾಫ್ಟ್‌ಬಾಲ್ ಸ್ಪರ್ಧೆಗೆ ಮಂಗಳೂರು ವಿಶ್ವವಿದ್ಯಾಲಯದ ತಂಡಕ್ಕೆ ಶ್ರೀ ಮಹಾವೀರ ಕಾಲೇಜಿನ ವಿದ್ಯಾರ್ಥಿಗಳಾದ ಎಸ್.ಜಿ. ಶಶಿಧರ, ಮೊಹಮ್ಮದ್ ಜುನೈದ್, ಪ್ರಮೋದ್ ಸಿ., ಅಭಿಷ್ರುತ್ ಹಾಗೂ ನವ್ಯಶ್ರೀ ಜೈನ್ ಆಯ್ಕೆಯಾಗಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅಕ್ಷಿತ್ ರೈ ತರಬೇತಿ ನೀಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ-ಅಧ್ಯಾಪಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
