ರಾಜ್ಯಮಟ್ಟದ ಯುವಜನೋತ್ಸವ:  ತಾಂತ್ರಿಕ ಶಿಕ್ಷಣ ಇಲಾಖೆಗೆ ಸಮಗ್ರ ಪ್ರಶಸ್ತಿ

ರಾಜ್ಯಮಟ್ಟದ ಯುವಜನೋತ್ಸವ: ತಾಂತ್ರಿಕ ಶಿಕ್ಷಣ ಇಲಾಖೆಗೆ ಸಮಗ್ರ ಪ್ರಶಸ್ತಿ


ಮೂಡುಬಿದಿರೆ: ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಅಂತರ್ ವಿಶ್ವವಿದ್ಯಾಲಯದ ಯುವಜನೋತ್ಸವವು ಬಾಗಲಕೋಟೆಯ ಬಿ.ವಿ.ವಿ.ಎಸ್  ಪಾಲಿಟೆಕ್ನಿಕ್ ನಲ್ಲಿ ಒಂದು ವಾರಗಳ ಕಾಲ ವಿಜೃಂಭಣೆಯಿಂದ ನಡೆಯಿತು.

ಯುವಜನೋತ್ಸವದಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಪ್ರದರ್ಶಿಸಿ ಅನೇಕ ಬಹುಮಾನಗಳನ್ನು ಪಡೆದುಕೊಂಡರು. ಅಲ್ಲದೆ ಸಮಗ್ರ ಪ್ರಶಸ್ತಿಯೂ ಲಭಿಸಿದೆ.

ತಾಂತ್ರಿಕ ಶಿಕ್ಷಣ ಇಲಾಖೆಯು ಆಯ್ಕೆ ಮಾಡಿದ ವಿದ್ಯಾರ್ಥಿಗಳ ಪೈಕಿ ಆರು ಮಂದಿ ಎಸ್ ಎನ್ ಎಂ ಪಾಲಿಟೆಕ್ನಿಕ್ ಮೂಡುಬಿದಿರೆಯ ಸ್ವಯಂಸೇವಕರು ಆಗಿದ್ದಾರೆ. ಇವರ ಸಕ್ರಿಯ ಭಾಗವಹಿಸುವಿಕೆ ಮತ್ತು ಕಠಿಣ ಪರಿಶ್ರಮ ಈ ಸಾಧನೆಗೆ ಕಾರಣವಾಗಿದೆ.

ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article