ಕಾರು-ಬೈಕ್ ಢಿಕ್ಕಿ: ಇಬ್ಬರು ಯುವಕರಿಗೆ ಗಾಯ
Thursday, February 12, 2026
ಮೂಡುಬಿದಿರೆ: ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಗುರುವಾರ ಕಾರು ಮತ್ತು ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಬನ್ನಡ್ಕ ದೇವಸ್ಥಾನದ ಸಮೀಪ ಬೈಕ್ ಸವಾರ ಸೂರಜ್ ಹಾಗೂ ಅವರ ಸಂಬಂಧಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.