ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ.ಗೆ ಪಿಎಚ್‌ಡಿ ಪದವಿ ಪ್ರದಾನ

ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ.ಗೆ ಪಿಎಚ್‌ಡಿ ಪದವಿ ಪ್ರದಾನ


ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ.

ಪವಿತ್ರ ಎ.ವಿ. ಅವರು “ಸೈಕೋಸೋಷಿಯಲ್ ಡೈಮೆನ್ಶನ್ಸ್ ಆಫ್ ಸುಸೈಡಲ್ ಬಿಹೇವಿಯರ್ ಅಮಾಂಗ್ ರೂರಲ್ ಅಡೊಲೆಸೆಂಟ್ಸ್ ವಿಥ್ ಸ್ಪೆಷಲ್ ರೆಫರೆನ್ಸ್ ಟು ಗವರ್ನ್ಮೆಂಟ್ ಪ್ರಿ-ಯುನಿವರ್ಸಿಟಿ ಕಾಲೇಜಸ್ ಇನ್ ಕರ್ನಾಟಕ” ಎಂಬ ವಿಷಯದ ಕುರಿತು ಮಹಾಪ್ರಬಂಧ ಮಂಡಿಸಿದ್ದರು. ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಲೋಕೇಶ್ ಎಂ.ಯು. ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ, ಯಶಸ್ವಿಯಾಗಿ ಪಿಎಚ್‌ಡಿ ಪೂರ್ಣಗೊಳಿಸಿದ್ದಾರೆ.

ಜ. 30ರಂದು ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಿದರು.

ಪವಿತ್ರ ಎ.ವಿ. ಅವರು ಎಂಆರ್‌ಪಿಎಲ್ ಸಂಸ್ಥೆಯ ಮಾರ್ಕೆಟಿಂಗ್ ವಿಭಾಗದ ಚೀಫ್ ಮ್ಯಾನೇಜರ್ ಸ್ವಾಮಿ ಪ್ರಸಾದ್ ಅವರ ಪತ್ನಿ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article