ಮೂಡುಮಾನಾ೯ಡು ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ
Monday, February 23, 2026
ಮೂಡುಬಿದಿರೆ: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡು ಮಾರ್ನಾಡುವಿನಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಗಿತ್ತು. ಪಡುಮಾನಾ೯ಡು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ವಾಸುದೇವ ಭಟ್ ಮೆಟ್ರಿಕ್ ಮೇಳವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಎಸ್. ವಿರೂಪಾಕ್ಷಪ್ಪ, ಶಿಕ್ಷಣ ಸಂಯೋಜಕ ರಾಜೇಶ್ ಭಟ್, ಮೂಡು ಮಾರ್ನಾಡು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಡಾ. ಬಿ ರಾಜಶ್ರೀ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳಾದ ಯಶೋದಾ, ಶಕುಂತಳಾ ಹಾಜರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಡಿಸೋಜಾ ಸ್ವಾಗತಿಸಿದರು. ಶಾಲಾ ಜಿ .ಪಿ.ಟಿ ಶಿಕ್ಷಕಿ ಪ್ರತೀಕ್ಷಾ ಜೈನ್ ಮೆಟ್ರಿಕ್ ಮೇಳದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಜಿ.ಪಿ. ಟಿ. ಶಿಕ್ಷಕಿ ಶೋಭಾ ಕಾಯ೯ಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಪ್ರಮೋದ ವಂದಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಮತ್ತು ಮಕ್ಕಳ ಹೆತ್ತವರು, ಊರಿನವರು, ಶಾಲಾ ಹಳೆ ವಿದ್ಯಾರ್ಥಿಗಳು ಹಾಜರಿದ್ದು ಮೆಟ್ರಿಕ್ ಮೇಳವನ್ನು ಯಶಸ್ವಿಗೊಳಿಸಿದರು.

