ಅಳಿಯೂರು ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಗೆ ಉತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿ
Sunday, February 22, 2026
ಮೂಡುಬಿದಿರೆ: ಶಾಸಕ ಉಮಾನಾಥ ಕೋಟ್ಯಾನ್ ಅವರ ಸಹಕಾರದಲ್ಲಿ ಪ್ರದೀಪ್ ಕುಮಾರ್ ಅವರ ಅಧ್ಯಕ್ಷತೆಯ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳ ಮೂಲಕ ಗಮನಸೆಳೆದಿರುವ ಅಳಿಯೂರು ಹೈಸ್ಕೂಲ್ ನ ಎಸ್.ಡಿ.ಎಂ.ಸಿ. 2025- 26 ನೇ ಸಾಲಿನ ‘ಅತ್ಯುತ್ತಮ ಶಾಲಾಭಿವೃದ್ಧಿ ಸಮಿತಿ’ ಪ್ರಶಸ್ತಿಗೆ ಆಯ್ಕೆಯಾಗಿದೆ.
ವಾಲ್ಪಾಡಿ ಪಂಚಾಯತ್ ಮಾಜಿ ಅಧ್ಯಕ್ಷರೂ ಆಗಿರುವ ಪ್ರದೀಪ್ ಕುಮಾರ್ ಅವರು ಈ ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಬಳಿಕ ಸಮಗ್ರವಾಗಿ ಅಭಿವೃದ್ಧಿ ಕಂಡಿದೆ.
ಫಲಿತಾಂಶದಲ್ಲಿ ಕೂಡಾ ಒಳ್ಳೆಯ ಫಲಿತಾಂಶ ಪಡೆಯುತ್ತಿರುವ ಅಳಿಯೂರು ಹೈಸ್ಕೂಲ್ ನ ಪ್ರತಿಯೊಂದು ಕೆಲಸಗಳಲ್ಲೂ ಎಸ್ಡಿಎಂಸಿಯವರು ಕೈಜೋಡಿಸಿ ಅಭಿವೃದ್ಧಿಗೆ ಸಹಕರಿಸಿದ್ದಾರೆ.
ಅತ್ಯುತ್ತಮ ಎಸ್.ಡಿ.ಎಂ.ಸಿಯಾಗಿ ಆಯ್ಕೆಯಾಗುವಲ್ಲಿ ಪ್ರಮುಖ ಪಾತ್ರವಹಿಸಿದ ಮಾಜಿ ಅಧ್ಯಕ್ಷರಾದ ಪ್ರದೀಪ್ ಕುಮಾರ್, ಹಾಲಿ ಅಧ್ಯಕ್ಷರಾಗಿರುವ ರವೀಂದ್ರ, ಸದಸ್ಯರನ್ನು ವಿದ್ಯಾರ್ಥಿಗಳ ಪೋಷಕರು,ಶಿಕ್ಷಕ ವೃಂದ ಹಾಗೂ ವಿದ್ಯಾಭಿಮಾನಿಗಳು ಅಭಿನಂದಿಸಿದ್ದಾರೆ.
