ಮೂಡುಬಿದಿರೆಯ ಮೂವರು ವೀರರಾಣಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಆಯ್ಕೆ

ಮೂಡುಬಿದಿರೆಯ ಮೂವರು ವೀರರಾಣಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಆಯ್ಕೆ


ಮೂಡುಬಿದಿರೆ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೂಡುಬಿದಿರೆಯ ಮೂವರು ಮಹಿಳೆಯರು ಅಬ್ಬಕ್ಕ 500-ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ ಕಾರ್ಯಕ್ರಮದಲ್ಲಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. 

ಪ್ರಕೃತಿ ಚಿಕಿತ್ಸೆ ಹಾಗೂ ಸಮಗ್ರ ಸ್ವಾಸ್ಥ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಫಾರ್ಮಸಿಯ ಆಡಳಿತಾಧಿಕಾರಿ ಡಾ. ಗ್ರೀಷ್ಮಾ ವಿವೇಕ್ ಆಳ್ವ, ಪರಿಸರಸ್ನೇಹಿ ಚಟುವಟಿಕೆಗಳಲ್ಲಿ ಸೇವೆ ಸಲ್ಲಿಸುತ್ತಿರುವ, ಮೂಡುಬಿದಿರೆ ಜೈನ ಪಿಯು ಕಾಲೇಜಿನ ಉಪನ್ಯಾಸಕಿ ಸಂಧ್ಯಾ ಭಟ್ ಹಾಗೂ ತೆಂಕು ಹಾಗೂ ಬಡಗು ತಿಟ್ಟಿನ ಯುವ ಪ್ರಸಂಗಕರ್ತೆ ಶುಭಾಶಯ ಜೈನ್ ಪುರಸ್ಕಾರಕ್ಕೆ ಆಯ್ಕೆಯಾಗಿರುವವರು.

ಫೆ.16ರಂದು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article