ಉಚಿತ ಟ್ಯೂಷನ್: ಸಮಾರೋಪ

ಉಚಿತ ಟ್ಯೂಷನ್: ಸಮಾರೋಪ


ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಮೂಡುಬಿದಿರೆ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮದಡಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮೂರು ತಿಂಗಳ ಕಾಲ ಉಚಿತ ಟ್ಯೂಷನ್ ತರಬೇತಿ ನೀಡಲಾಗಿದ್ದು, ಅದರ ಸಮಾರೋಪ ಸಮಾರಂಭವು ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲೆಯ ಸಂಚಾಲಕ ಜಯಪ್ರಕಾಶ್ ಪಡವಳ್ ವಹಿಸಿಕೊಂಡು ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಇಂತಹ ತರಬೇತಿ ಕಾರ್ಯಕ್ರಮಗಳು ಉತ್ತಮ ಅವಕಾಶವನ್ನು ಕಲ್ಪಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಧವಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಮಲ್ಲಿಕಾ ರಾವ್ ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಹಾಗೂ ಪೋಷಕರ ಜವಾಬ್ದಾರಿ ಎಂಬ ವಿಷಯಗಳ ಕುರಿತು ವಿವರಿಸಿದರು. ವಿದ್ಯಾರ್ಥಿಗಳು ಸರಿಯಾದ ವೇಳಾಪಟ್ಟಿ ರೂಪಿಸಿ ಅದರಂತೆ ಅಧ್ಯಯನ ಮಾಡಿದಲ್ಲಿ ಉತ್ತಮ ಅಂಕಗಳನ್ನು ಗಳಿಸುವುದು ಸಾಧ್ಯವೆಂದರು. ಜೊತೆಗೆ, ಮಕ್ಕಳ ಶಿಕ್ಷಣದಲ್ಲಿ ಪೋಷಕರ ಪಾತ್ರ ಮಹತ್ವದ್ದೆಂದು ತಿಳಿಸಿ, ಜ್ಞಾನ ವಿಕಾಸ ಕಾರ್ಯಕ್ರಮದಡಿ ನಡೆಯುತ್ತಿರುವ ಈ ಉಪಕ್ರಮ ಶ್ಲಾಘನೀಯವೆಂದರು.

ಯೋಜನಾಧಿಕಾರಿ ಬಿ. ಧನಂಜಯ್ ಮಾತನಾಡಿ, ಶಿಕ್ಷಣಕ್ಕೆ ಯೋಜನೆಯಿಂದ ನೀಡಲಾಗುವ ವಿವಿಧ ಅನುದಾನಗಳು ಹಾಗೂ ಟ್ಯೂಷನ್ ತರಗತಿಗಳ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಶಂಕರ್, ಒಕ್ಕೂಟದ ಅಧ್ಯಕ್ಷ ಭೋಜ ಸುವರ್ಣ, ಸುನಿತಾ ಭಟ್, ಅಮಿತಾ, ನರಸಿಂಹ ಮಡಿವಾಳ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿ ಛಾಯಾ ನಿರೂಪಿಸಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ವಿದ್ಯಾ ಸ್ವಾಗತಿಸಿ, ಶಿಕ್ಷಕಿ ಜಯಶ್ರೀ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು, ಸೇವಾಪ್ರತಿನಿಧಿಗಳು ಹಾಗೂ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article