ಮೂಡುಬಿದಿರೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡುಬಿದಿರೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ


ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ಆಶ್ರಯದಲ್ಲಿ ಫೆಬ್ರವರಿ 21ರಂದು ನಡೆಯಲಿರುವ ದ್ವಿತೀಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು.

ಕಡಂದಲೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಸಮ್ಮೇಳನ ನಡೆಯಲಿದ್ದು, ಸಾಹಿತ್ಯಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಸುಚರಿತ ಶೆಟ್ಟಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪರಿಷತ್ತಿನ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಕೆ., ಕಾರ್ಯದರ್ಶಿ ಸದಾನಂದ ನಾರಾವಿ, ಸಂಘಟನಾ ಕಾರ್ಯದರ್ಶಿಗಳಾದ ಯತಿರಾಜ್ ಶೆಟ್ಟಿ ಮತ್ತು ಮಹಾದೇವ ಮೂಡುಕೊಣಾಜೆ, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ಎನ್. ಕೆಂಬಾರೆ, ಉದಯ ಪೂಜಾರಿ, ರಶ್ಮಿ ರಾಜೇಶ್, ಸುಜಿತ್ ಅಮೀನ್, ರಾಕೇಶ್ ಪೂಜಾರಿ ಹಾಗೂ ಜಗದೀಶ್ ಪೂಜಾರಿ ಪೂಪಾಡಿಕಲ್ಲು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article