ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪ? ಅರಿವು ಅಗತ್ಯ: ಮನು ಪಟೇಲ್
ಅಪಾಯದಲ್ಲಿ ಸಿಲುಕಿದ ಮಕ್ಕಳನ್ನು ರಕ್ಷಣೆ ಮಾಡುವಾಗ ಅಥವಾ ಅಪರಾಧಿ ಚಟುವಟಿಕೆಗಳಲ್ಲಿ ನಿರತರಾದ ಮಕ್ಕಳನ್ನು ಕಾನೂನಿನ ಸುಪರ್ದಿಗೆ ತೆಗೆದುಕೊಳ್ಳುವ ಸಮಯದಲ್ಲಿ ಬಾಲ ನ್ಯಾಯ ಕಾಯ್ದೆಯ ನಿಯಮಗಳನ್ನು ಪಾಲಿಸಿ ಪ್ರಕ್ರಿಯೆಗಳನ್ನು ಕೈಗೊಳ್ಳಬೇಕಾಗುತ್ತದೆ. ಸಮವಸ್ತ್ರದಲ್ಲಿರುವ ಪೊಲೀಸರನ್ನು ಕಂಡು ಮಕ್ಕಳು ಬೆದರುವ ಸಾಧ್ಯತೆಗಳು ಹೆಚ್ಚಿರುತ್ತವೆ. ಮಕ್ಕಳಿಗೆ ಸಂಬಂಧಪಟ್ಟ ಪ್ರಕರಣಗಳನ್ನು ದೊಡ್ಡವರ ಪ್ರಕರಣಗಳಂತೆ ನೋಡಲಾಗುವುದಿಲ್ಲ. ಮಕ್ಕಳ ಹಕ್ಕುಗಳ ರಕ್ಷಣೆಯ ಪ್ರಕ್ರಿಯೆಗಳನ್ನು ನಿಭಾಯಿಸಲು ತರಬೇತಿ ಹೊಂದಿದ ಸಿಬ್ಬಂದಿಗಳನ್ನು ತಯಾರಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳು ಸಹಕಾರಿಯಾಗಿವೆ. ಕಾರ್ಯಾಗಾರದಲ್ಲಿ ಪಡೆದ ಜ್ಞಾನವನ್ನು ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನು?ನಗೊಳಿಸಬೇಕು ಎಂದು ಅವರು ಹೇಳಿದರು.
ಬಾಲ ನ್ಯಾಯ ಮಂಡಳಿಯ ಅಧ್ಯಕ್ಷ, ಎಸಿಜೆಎಮ್ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಸಂತೋ? ಶ್ರೀವತ್ಸವ್ ಮಾತನಾಡಿ ನ್ಯಾಯಾಲಯ ಮತ್ತು ಪೊಲೀಸ್ ಇಲಾಖೆ ಕಾನೂನಿನ ರಕ್ಷಕರು. ಇಲಾಖೆಯಲ್ಲಿ ಮಕ್ಕಳ ಜೊತೆ ನೇರವಾಗಿ ವ್ಯವಹರಿಸುವ ಸಿಬ್ಬಂದಿಗಳಿಗೆ ಬಾಲ ನ್ಯಾಯ ಕಾನೂನಿನ ಮಾಹಿತಿ ಇರುವುದು ಅಗತ್ಯ. ಮಕ್ಕಳಿಗೆ ಸಂಬಂಧಿಸಿದ ದೂರುಗಳು ಬಂದಾಗ ಅದನ್ನು ನಿರ್ಲಕ್ಷ್ಯ ಮಾಡದೆ ತ್ವರಿತವಾಗಿ ಸ್ಪಂದಿಸಿದಾಗ ಹಲವಾರು ಮುಗ್ದ ಜೀವಗಳನ್ನು ಸಮಯೋಚಿತವಾಗಿ ರಕ್ಷಿಸಬಹುದು ಎಂದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆ ಸಂದರ್ಭದಲ್ಲಿ ಮಾಹಿತಿ ಕೊರತೆಯಿಂದ ಸಣ್ಣಪುಟ್ಟ ತಪ್ಪುಗಳಾಗುತ್ತವೆ. ಕಾರ್ಯಾಗಾರಗಳಿಂದ ಕಾನೂನಿನ ಬಗ್ಗೆ ತಿಳುವಳಿಕೆ ಹೆಚ್ಚಾಗುತ್ತದೆ ಹಾಗೂ ಮುಂದಿನ ದಿನಗಳಲ್ಲಿ ಸಮರ್ಪಕ ಸೇವೆ ನೀಡಲು ಅನುಕೂಲವಾಗುತ್ತದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಬಾಗವಹಿಸಿದ್ದ ಯುನಿಸೆಫ್ ಪ್ರಾದೇಶಿಕ ಸಂಯೋಜಕ ಡಾ. ಕೊಣಿಲ ರಾಘವೇಂದ್ರ ಭಟ್ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜೂಹಿ ದಾಮೋದರ್ ಉಪಸ್ಥಿತರಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿ, ಮಹೇಶ್ ದೇವಾಡಿಗ ನಿರೂಪಿಸಿ, ವಂದಿಸಿದರು.
