ಫೆ.3 ರಂದು ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ
Sunday, February 1, 2026
ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತ ನಾಲ್ಕನೆ ವರ್ಧಂತ್ಯುತ್ಸವದ ಅಂಗವಾಗಿ ಮಂಗಳವಾರ ಬೆಳಗ್ಗೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಬಾಹುಬಲಿ ಮೂರ್ತಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.
ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿಭಟ್ಟಾರಕ ಸ್ವಾಮೀಜಿ ಮಂಗಲಪ್ರವಚನ ನೀಡುವರು.
ಇದಕ್ಕೆ ಪೂರ್ವಭಾವಿಯಾಗಿ ಇಂದು ಸೋಮವಾರ ಬೆಳಗ್ಗೆ ಒಂಬತ್ತು ಗಂಟೆಯಿಂದ ರತ್ನಗಿರಿಯಲ್ಲಿ ತೋರಣಮುಹೂರ್ತ, ವಿಮಾನಶುದ್ಧಿ, ಷೋಡಶ ಕಲಶಾಭಿಷೇಕ ಹಾಗೂ ಸಂಜೆ ನಾಲ್ಕು ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯುತ್ತವೆ.