ಸಾಮಾಜಿಕ ಪರಿವರ್ತನೆಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಜ್ಞಾನವೇ ಅಡಿಪಾಯ: ಪ್ರೊ. ಕೆ. ಶ್ರೀಪಾದ ಭಟ್

ಸಾಮಾಜಿಕ ಪರಿವರ್ತನೆಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಜ್ಞಾನವೇ ಅಡಿಪಾಯ: ಪ್ರೊ. ಕೆ. ಶ್ರೀಪಾದ ಭಟ್


ಉಜಿರೆ: ಈ ನೆಲದ ಭಾಷೆ, ಸಂಸ್ಕೃತಿ, ಸಾಹಿತ್ಯ ಮತ್ತು ಆಚರಣೆಗಳಿಗೆ ತನ್ನದೇ ಆದ ಮಹತ್ವ ಮತ್ತು ಶಕ್ತಿ ಇದೆ. ವಿದ್ಯಾರ್ಥಿಗಳು ವಿಚಾರವಂತರಾಗಬೇಕು. ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಅರ್ಥೈಸಿಕೊಳ್ಳುವುದರ ಜತೆಗೆ ಸಮಾಜದ ತೊಡಕು ಮತ್ತು ಸವಾಲುಗಳನ್ನು ಸರಿದೂಗಿಸಲು ಪ್ರಯತ್ನಿಸಬೇಕು ಎಂದು ಗೋವಾದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಅತಿಥಿ ಪ್ರಾಧ್ಯಾಪಕ ಹಾಗೂ ಮಣಿಪಾಲದ ಅಕಾಡೆಮಿ ಆಫ್ ಹೈಯರ್ ಎಜುಕೇಷನ್‌ನ ಸಹಾಯಕ ಪ್ರಾಧ್ಯಾಪಕ ಪ್ರೊ. ಕೆ. ಶ್ರೀಪಾದ ಭಟ್ ಹೇಳಿದರು.

ಅವರು ಫೆ.26 ರಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇಂಗ್ಲಿಷ್ ವಿಭಾಗವು ಯುಜಿ ಮತ್ತು ಪಿಜಿ ಅಧ್ಯಯನ ಹಾಗೂ ಸಂಶೋಧನಾ ವಿಭಾಗ, ಸಂಶೋಧನೆ ಮತ್ತು ಅಭಿವೃದ್ಧಿ ಕೋಶ, ಆಂತರಿಕ ಗುಣಮಟ್ಟ ಭರವಸೆ ಕೋಶ ಸಹಭಾಗಿತ್ವದಲ್ಲಿ ಇಂಗ್ಲಿಷ್ ಮತ್ತು ಸಮಾಜಶಾಸ್ತ್ರ ವಿಷಯಗಳ ‘ಸಮಾಜದ ಪುನರ್ಲೇಖನ: 21ನೇ ಶತಮಾನದಲ್ಲಿ ಭಾಷೆ, ಸಾಹಿತ್ಯ ಮತ್ತು ಸಾಮಾಜಿಕ ಪರಿವರ್ತನೆ’ ಎಂಬ ಶಿರ್ಷಿಕೆಯಲ್ಲಿ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ ಮಾತನಾಡಿದರು. 

ವಿನೂತನ ಆಲೋಚನೆಗಳು ಸಾಹಿತ್ಯಿಕ ದೃಷ್ಟಿಕೋನವನ್ನು ವಿಸ್ತರಿಸುತ್ತಾ ಸಮಾಜದ ಪರಿವರ್ತನೆಯಲ್ಲಿ ಸಕ್ರಿಯ ರಾಗಬೇಕು. ಇಂತಹ ವಿಚಾರ ಸಂಕಿರಣಗಳು ಹಲವು ಹೊಸತನಗಳಿಗೆ ವೇದಿಕೆಯಾಗಲಿದೆ ಎಂದು ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ. ಮಾತನಾಡಿ, ಶೈಕ್ಷಣಿಕ ಬೆಳವಣಿಗೆ ಎಂದರೆ ಕೇವಲ ಉಪನ್ಯಾಸಕರ ಬೋಧನೆ ಮತ್ತು ವಿದ್ಯಾರ್ಥಿಗಳ ಜ್ಞಾನಾರ್ಜನೆ ಅಲ್ಲ. ಶೈಕ್ಷಣಿಕ ಸಂಸ್ಥೆಗಳಲ್ಲಿ ಇಂದು ಸಂಶೋಧನೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಇದು ಹೊಸ ಜ್ಞಾನ ಪರಂಪರೆಯನ್ನು ಪರಿಚಯಿಸುವುದರ ಜೊತೆಗೆ ಬದುಕಿನ ಮೌಲ್ಯವನ್ನು ಹೆಚ್ಚಿಸುತ್ತದೆ. ಅನೇಕ ಸವಾಲು ಮತ್ತು ಪ್ರಶ್ನೆಗಳಿಗೆ ಪರಿಹಾರ ಸೂಚಿಸಿ ಹೊಸ ಆಲೋಚನೆಗಳನ್ನು ಬೆಳೆಸುತ್ತದೆ. ಪ್ರಸ್ತುತ ವಿದ್ಯಮಾನಗಳಲ್ಲಿ ಇಂಗ್ಲಿಷ್ ಭಾಷೆ ಮತ್ತು ಸಂಶೋಧನೆಗೆ ವಿಶೇಷ ಪ್ರಾಮುಖ್ಯತೆ ಇದೆ. ವಿದ್ಯಾರ್ಥಿಗಳು ಭಾಷೆಯ ಆಯ್ಕೆಯಲ್ಲಿ ಆಸಕ್ತಿ ತೋರಬೇಕು. ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಲು ಶಿಕ್ಷಕರು ಪ್ರಯತ್ನಿಸಬೇಕು. ವಿದ್ಯಾರ್ಥಿಗಳಲ್ಲಿ ವೈಚಾರಿಕ ಪ್ರಬುದ್ಧತೆಯನ್ನು ಹೆಚ್ಚಿಸಲು ಕಾಲೇಜಿನಲ್ಲಿ ನಿರಂತರವಾಗಿ ವಿಚಾರ ಸಂಕಿರಣದಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದು ಕೊಳ್ಳಬೇಕು ಎಂದರು.

ಕೇರಳದ ಗೋವಿಂದ ಪೈ ಮೋಮೊರಿಯಲ್ ಸರ್ಕಾರಿ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಮತ್ತು ಉಪನ್ಯಾಸಕಿ ಡಾ. ಎಐ ಮುನೀರ ಜೆ., ಮಂಗಳೂರು ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದ ನಿವೃತ್ತ ಮುಖ್ಯಸ್ಥೆ ಡಾ. ರಾಜಲಕ್ಷ್ಮಿ ಎನ್.ಕೆ., ಕಾಲೇಜಿನ ವಿಚಾರ ಸಂಕಿರಣದ ಸಂಯೋಜಕ ಜಿ.ಆರ್. ಭಟ್, ಪಿಜಿ ಸ್ನಾತಕೋತ್ತರ ಕೇಂದ್ರದ ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಡಾ. ಮಂಜುಶ್ರೀ ಆರ್ ಉಪಸ್ಥಿತರಿದ್ದರು.


ಭಾಷೆ, ಸಾಹಿತ್ಯ ಮತ್ತು ಸಾಮಾಜಿಕ ಪರಿವರ್ತನೆ ಪರಸ್ಪರ ಸಂಬಂಧಿತವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಮಹತ್ವದ ಪಾತ್ರವಹಿಸುತ್ತವೆ. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನಗಳ ಅಭಿವೃದ್ಧಿಯೊಂದಿಗೆ, ಕಂಪ್ಯೂಟರ್‌ಗಳು ಮತ್ತು ಮೊಬೈಲ್ ಫೋನ್‌ಗಳ ನಿರಂತರ ಬಳಕೆಯಿಂದ ವಿಶೇಷವಾಗಿ ಯುವಜನತೆ ಮತ್ತು ವಿದ್ಯಾರ್ಥಿಗಳಲ್ಲಿ ಸಂವಹನ ಕೌಶಲ್ಯ ಮತ್ತು ಬರವಣಿಗೆ ಹವ್ಯಾಸದ ಮೇಲಿನ ಹಿಡಿತ ಕಡಿಮೆಯಾಗುತ್ತಿರುವುದು ಕಂಡುಬರುತ್ತಿದೆ. ಈ ರಾಷ್ಟ್ರೀಯ ಸಮ್ಮೇಳನದ ಮೂಲಕ ವಿದ್ಯಾರ್ಥಿಗಳು ಮತ್ತು ಪ್ರತಿನಿಧಿಗಳು ತಮ್ಮ ಉಜ್ವಲ ಭವಿಷ್ಯ ಮತ್ತು ಕೀರ್ತಿಯುತ ವೃತ್ತಿಜೀವನವನ್ನು ರೂಪಿಸಿಕೊಳ್ಳಲಿ ಎಂದು ಆಶಿಸುತ್ತೇನೆ. -ಡಾ. ಡಿ. ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿಗಳು ಮತ್ತು ಅಧ್ಯಕ್ಷರು ಎಸ್.ಡಿ.ಎಂ ಶಿಕ್ಷಣ ಸಂಸ್ಥೆ, ಧರ್ಮಸ್ಥಳ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article