ಬೆಳ್ತಂಗಡಿ ಮೂಲದ ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

ಬೆಳ್ತಂಗಡಿ ಮೂಲದ ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ


ಉಜಿರೆ: ಅಮೆರಿಕದಲ್ಲಿ ಖ್ಯಾತ ಹೃದಯ ಹಾಗೂ ಥೊರಾಸಿಕ್ ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಯು. ರಾಮಯ್ಯ ಗೌಡ ಹಾಗೂ ಅವರ ಪತ್ನಿ, ನರ್ಸಿಂಗ್ ಕಾಲೇಜಿನ ಪ್ರಾಧ್ಯಾಪಕಿ ಕೊನ್ನಿ ಗೌಡ ಅವರು ಇತ್ತೀಚೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಗೆ ಭೇಟಿ ನೀಡಿದರು.

1939ರಲ್ಲಿ ಜನಿಸಿದ ಡಾ. ರಾಮಯ್ಯ ಗೌಡ ಅವರು ಬೆಳ್ತಂಗಡಿಯ ವಳಂಬ್ರ ಕುಟುಂಬಕ್ಕೆ ಸೇರಿದವರು. ಕಡಿರುದ್ಯಾವರ ಸರ್ಕಾರಿ ಶಾಲೆ ಹಾಗೂ ಉಜಿರೆಯ ಎಸ್‌ಡಿಎಂ ಹೈಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡಿ, ಮಂಗಳೂರಿನ ಸೆಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪಿಯುಸಿ ಮತ್ತು ಮೈಸೂರಿನಲ್ಲಿ ಎಂ.ಬಿ.ಬಿ.ಎಸ್ ಪದವಿ ಪಡೆದಿದ್ದಾರೆ. 1965ರಲ್ಲಿ ಉನ್ನತ ಶಿಕ್ಷಣಕ್ಕಾಗಿ ಅಮೆರಿಕಕ್ಕೆ ತೆರಳಿ ಹೃದಯ ಮತ್ತು ಥೊರಾಸಿಕ್ ಶಸ್ತ್ರಚಿಕಿತ್ಸೆಯಲ್ಲಿ ಪರಿಣತಿ ಪಡೆದು ನ್ಯೂಯಾರ್ಕ್ ಹಾಗೂ ಗ್ರಾಹಂ ಮೆಡಿಕಲ್ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ನಿವೃತ್ತಿಯ ನಂತರವೂ ಯಾವುದೇ ಸಂಬಳವಿಲ್ಲದೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಸ್ವದೇಶಕ್ಕೆ ಆಗಮಿಸಿದ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಬೆಂಬಲ ಹಾಗೂ ಮಾರ್ಗದರ್ಶನ ನೀಡುತ್ತಿರುವುದು ವಿಶೇಷ.

ಎಸ್‌ಡಿಎಂ ಆಸ್ಪತ್ರೆ ಆಡಳಿತ ಮಂಡಳಿ ಮುಖ್ಯಸ್ಥ ಎಂ. ಜನಾರ್ದನ್, ವೈದ್ಯರು ಹಾಗೂ ಸಿಬ್ಬಂದಿ ಡಾ. ರಾಮಯ್ಯ ಗೌಡ ಕುಟುಂಬವನ್ನು ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article