15 ವರ್ಷಗಳಿಂದ ತಲೆಮರೆಸಿಕೊಂಡಿದ್ದವನ ಬಂಧನ
ಬಂಧಿತನನ್ನು ಬೆಂಗಳೂರಿನ ವಿಶ್ವನಿಧಂನ ಉಪ್ಕಾರ್ ಲೇ ಔಟ್ ನಿವಾಸಿ ಅಜಯ್ ಪ್ರಸಾದ್ ಜಿ. (41) ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ನ್ಯಾನೋ ಪ್ರೊರೆಕ್ಸ್ ಇಂಡಿಯಾ ಎಂಬ ಸಂಸ್ಥೆಯ ಪ್ರೊರೆಕ್ಸ್ ರೋಬೋಟ್ ಸಾಫ್ಟ್‌ವೇರ್ ಮೂಲಕ ಕರೆನ್ಸಿ ಟ್ರೆಡಿಂಗ್ ಮತ್ತು ಷೇರು ವ್ಯವಹಾರದಲ್ಲಿ ತಿಂಗಳಿಗೆ ಶೇ.40 ಲಾಭ ಹಾಗೂ ಶೇ.20 ಮರುಪಾವತಿ ನೀಡುವುದಾಗಿ ನಂಬಿಸಿ, ಐಡಿ ಕಾರ್ಡ್ ಮತ್ತು ದಾಖಲೆಗಳನ್ನು ನೀಡಿ ವಿಶ್ವಾಸ ಹುಟ್ಟಿಸಿ, ಪ್ರೊರೆಕ್ಸ್ ರೋಬೋಟ್ ಸಾಫ್ಟ್‌ವೇರ್ ಬಳಸಲು ಅವಕಾಶ ನೀಡುವುದಾಗಿ ತಿಳಿಸಿ, ವಿವಿಧ ಗ್ರಾಹಕರಿಂದ ಸುಮಾರು 1 ಕೋಟಿ 20 ಲಕ್ಷ ಹಣವನ್ನು ಪಡೆದಿದ್ದು, ಹಣಕ್ಕೆ ಯಾವುದೇ ಲಾಭ ಅಥವಾ ಮರುಪಾವತಿ ನೀಡದೇ, ಹಣವನ್ನು ದುರುಪಯೋಗಪಡಿಸಿ ವಂಚನೆ ನಡೆಸಿರುವುದಾಗಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2011ನೇ ಸಾಲಿನಲ್ಲಿ 3 ಪ್ರಕರಣಗಳು ದಾಖಲಾಗಿತ್ತು.
ಈ ಪ್ರಕರಣದ ಆರೋಪಿಗಳ ಪೈಕಿ ತಲೆವರೆಸಿಕೊಂಡಿರುವ ಮತ್ತು ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಅಜಯ್ ಪ್ರಸಾದ್ ಜಿ. ಎಂಬುವವರನ್ನು ಫೆ.20 ರಂದು ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಬೆಂಗಳೂರಿನಲ್ಲಿ ಬಂಧಿಸಿ ಮಾಡಿ ಮಂಗಳೂರು ನಗರದ 7ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.