ಬೀದಿಬದಿ ವ್ಯಾಪಾರಿಗಳ ಮೇಲೆ ಬುಲ್ದೊಜರ್ ಕಾರ್ಯಾಚರಣೆಗೆ ಆಕ್ರೋಶ, ತೊಕ್ಕೊಟ್ಟಿನಲ್ಲಿ ಪ್ರತಿಭಟನೆ
ಸ್ಥಳೀಯ ಸಂಸ್ಥೆಗಳು ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸದೆ ಅವರ ಕಾನೂನುಬದ್ದ ಹಕ್ಕನ್ನು ನಿರಾಕರಿಸಿರುವುದೇ ಈ ರೀತಿಯ ಧಾಳಿಗೆ ಕಾರಣವಾಗಿದೆ ಎಂದವರು ಹೇಳಿದರು.
ಹಿರಿಯ ರೈತ ನಾಯಕ ಕೃಷ್ಣಪ್ಪ ಸಾಲಿಯಾನ್, ಡಿವೈಎಫ್ಐ ತಾಲೂಕು ಕಾರ್ಯದರ್ಶಿ ರಿಜ್ವಾನ್ ಹರೇಕಳ, ಸಂಘದ ಅಧ್ಯಕ್ಷರಾದ ಮುಜಾಫರ್ ಅಹ್ಮದ್ ಮಾತನಾಡಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಪ್ರಮುಖರಾದ ಶೇಖರ್ ಕುಂದರ್, CITU ಜಿಲ್ಲಾ ಮುಖಂಡರಾದ ಸುಂದರ ಕುಂಪಲ, ಪ್ರಮೋಧಿನಿ ಕಲ್ಲಾಪು,ಬೀದಿಬದಿ ವ್ಯಾಪಾರಸ್ಥರ ಸಂಘದ ನಾಯಕರಾದ ಅಬ್ದುಲ್ ಖಾದರ್ ವಾಮಂಜೂರು, ಸಿಕಂದರ್ ಬೇಗ್,ವಿನಾಯಕ್ ಶೆಣೈ,ಸಲೀಮ್ ಬೀರಿ, ವಿಜಯ್ ತಲಪಾಡಿ, ವಿಕ್ರಂ, ಮರ್ಸಿನ್ ಡಿಸೋಜಾ, ನವಾಜ್, ಕಲಂದರ್, ಸದಾಶಿವ, ವಿಶ್ವ, ದಿನೇಶ್, ಹರೀಶ್ ಕೆರೆಬೈಲ್ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್ ಎಸ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಫೆ.17: ಉಳ್ಳಾಲ ತಾಲೂಕು ಬೀದಿಬದಿ ವ್ಯಾಪಾರಸ್ಥರ ಸಮಾವೇಶ
ಬೀದಿಬದಿ ವ್ಯಾಪಾರಿಗಳ ಮೇಲೆ ಲೋಕೋಪಯೋಗಿ ಮತ್ತು ಹೆದ್ದಾರಿ ಪ್ರಾಧಿಕಾರ ನಡೆಸುತ್ತಿರುವ ದೌರ್ಜನ್ಯವನ್ನು ಸಮಗ್ರವಾಗಿ ಎದುರಿಸಲು ಫೆಬ್ರವರಿ 17 ರಂದು ಬೆಳಿಗ್ಗೆ 10ಗಂಟೆಗೆ ಕುತ್ತಾರಿನಲ್ಲಿರುವ ಮುನ್ನೂರು ಯುವಕ ಮಂಡಲದ ಸಭಾಭವನದಲ್ಲಿ ಉಳ್ಳಾಲ ತಾಲೂಕು ಮಟ್ಟದ ಬೀದಿಬದಿ ವ್ಯಾಪಾರಸ್ಥರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಆ ಸಮಾವೇಶದಲ್ಲಿ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ, ಐಡಿ ಕಾರ್ಡ್, ಪ್ರಮಾಣ ಪತ್ರ, ಪಿ ಎಂ ಸ್ವನಿಧಿ ಸಾಲ, ತರಬೇತಿ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಿದೆ ಎಂದು ಸಂಘದ ಗೌರವಾಧ್ಯಕ್ಷರಾದ ಬಿ.ಕೆ. ಇಮ್ತಿಯಾಜ್ ತಿಳಿಸಿದರು.

