ಲೂಡೋ ಆಟದ ಕಾಯಿನ್ ನುಂಗಿ ಉಸಿರುಗಟ್ಟಿ ಬಾಲಕಿ ಮೃತ್ಯು

ಲೂಡೋ ಆಟದ ಕಾಯಿನ್ ನುಂಗಿ ಉಸಿರುಗಟ್ಟಿ ಬಾಲಕಿ ಮೃತ್ಯು


ಉಳ್ಳಾಲ: ಎಂಟು ವರ್ಷದ ಬಾಲಕಿಯೊಬ್ಬಳು ಲೂಡೊ ಆಟದಲ್ಲಿ ಬಳಸುವ ಪ್ಲಾಸ್ಟಿಕ್ ಕೋನ್ ಕಾಯ್ನ್ ಅನ್ನು ನುಂಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ.

ಮೂಲತಃ ಕಾಸರಗೋಡು ಜಿಲ್ಲೆಯ ಮಧೂರು ಉಳಿಯತಡ್ಕ ನಿವಾಸಿ ರಾಜೇಶ್ ಗಟ್ಟಿ ಎಂಬವರ ಎಂಟು ಪುತ್ರಿ ತನುಷ್ಕಾ ಮೃತಪಟ್ಟವಳು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಬಾಲಕಿ ಅವರ ತಾಯಿ ಉಳ್ಳಾಲದ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಉದ್ಯೋಗಕ್ಕೆ ತೆರಳಲು ಹತ್ತಿರವಾಗಲು ಕುಟುಂಬ ಸಮೇತ ಕೊಲ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಶನಿವಾರ ಮಧ್ಯಾಹ್ನ ತನುಷ್ಕಾ ತನ್ನ ಅಣ್ಣ ಮತ್ತು ತಂಗಿಯ ಜತೆ ಲೂಡೊ ಆಟದಲ್ಲಿ ತೊಡಗಿದ್ದಳು ಎನ್ನಲಾಗಿದೆ.

ಈ ವೇಳೆ ಬಾಲಕಿ ಲೂಡೊ ಆಟಕ್ಕೆ ಬಳಸುವ ಕೋನ್ ಆಕಾರದ ಪ್ಲಾಸ್ಟಿಕ್ ಕಾಯ್ನ್ ಅನ್ನು ಆಕಸ್ಮಿಕವಾಗಿ ನುಂಗಿದ್ದಾಳೆ. ಇದರಿಂದ ಉಸಿರುಗಟ್ಟಿದ್ದರಿಂದ ಬಾಲಕಿಯನ್ನು ಆಕೆಯ ತಾಯಿ ನೆರೆಹೊರೆಯವರ ಸಹಾಯದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆ ತಲುಪಿದಾಗ ಅಲ್ಲಿನ ವೈದ್ಯರು ಬಾಲಕಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಬಾಲಕಿಯ ಮೃತ ದೇಹದ ಮರಣೋತ್ತರ ಪರೀಕ್ಷೆಯ ವೇಳೆ ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಕೋನ್ ಕಾಯಿನ್ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article