ಕಾರು ಢಿಕ್ಕಿ: ಮುರಿದು ಬಿದ್ದ ವಿದ್ಯುತ್ ಕಂಬ
Monday, February 16, 2026
ವಿಟ್ಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬವೇ ಮುರಿದುಬಿದ್ದ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ಸೋಮವಾರ ನಡೆದಿದೆ.
ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದರೆ, ವಿದ್ಯುತ್ ಕಂಬ ಮುರಿದುಬಿದ್ದಿದೆ. ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ವಿದ್ಯುತ್ ಕಂಬ ಮುರಿದುಬಿದ್ದ ಪರಿಣಾಮ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಗಳು ರಸ್ತೆಗೆ ಬಿದ್ದಿದ್ದು, ಈ ವೇಳೆ ಯಾವುದೇ ವಾಹನ ಅಥವಾ ಜನ ಸಂಚಾರವಿಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.