ಡಾ.‌ ಅಪರ್ಣ ಆಳ್ವ ಅವರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ

ಡಾ.‌ ಅಪರ್ಣ ಆಳ್ವ ಅವರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ


ಬೆಂಗಳೂರು: ಕರ್ನಾಟಕ ವಚನ ಸಾಹಿತ್ಯ ಪರಿಷತ್ತು (ರಿ.) ಬೆಂಗಳೂರು ಇವರ ವತಿಯಿಂದ 2026ನೇ ವರ್ಷದ ಅಂತರಾಷ್ಟ್ರೀಯ ಮಹಿಳಾ ರಾಜ್ಯ ಸಮ್ಮೇಳನದ 'ವಚನ ಸಾಹಿತ್ಯದಲ್ಲಿ ಮಹಿಳಾ ಸ್ವಾತಂತ್ರ್ಯ' ಎಂಬ ವಿಚಾರ ಗೋಷ್ಠಿಗೆ ಮಂಗಳೂರಿನ ಡಾ. ದಯಾನಂದ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ಅಪರ್ಣ ಆಳ್ವ ಅವರ ಪ್ರಬಂಧವು   ಆಯ್ಕೆಯಾಗಿದ್ದು ಮಾ.14 ರಂದು ಬೆಂಗಳೂರಿನ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನ ಅಲ್ಯುಮಿನಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಬಂಧವನ್ನು ಮಂಡಿಸಿದರು.

ಈ ಸಂದರ್ಭದಲ್ಲಿ ಇವರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article