ಗಾಯಾಳು ಮೃತ್ಯು
Tuesday, March 3, 2026
ಬಂಟ್ವಾಳ: ಕಾರು ಢಿಕ್ಕಿಯಾಗಿ ಗಂಭೀರ ಸ್ವರೂಪದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರರೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಮಂಗಳೂರು ತಾಲೂಕಿನ ಅಡ್ಯಾರು ನಿವಾಸಿ ಜಯರಾಮ (65) ಮೃತಪಟ್ಟವರೆಂದು ಗುರುತಿಸಲಾಗಿದೆ.
ಎರಡು ದಿನಗಳ ಹಿಂದೆ ಬಂಟ್ವಾಳಕ್ಕೆ ಸಮೀಪದ ಬಡಗುಂಡಿ ಎಂಬಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್ ಸವಾರನಿಗೆ ಢಿಕ್ಕಿಯಾಗಿತ್ತೆನ್ನಲಾಗಿದೆ.
ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸ್ಕೂಟರ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.