ನವ ವಿವಾಹಿತ ಉದ್ಯಮಿ ಆತ್ಮಹತ್ಯೆ

ನವ ವಿವಾಹಿತ ಉದ್ಯಮಿ ಆತ್ಮಹತ್ಯೆ


ಬೆಳ್ತಂಗಡಿ: ಕಳೆದ ತಿಂಗಳಷ್ಟೇ ಹಸೆಮಣೆ ಏರಿದ್ದ ಯುವ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರನ್ನು ಪುತ್ತೂರು ತಾಲೂಕಿನ ನೆಲ್ಯಾಡಿ ಮೂಲದ, ಪ್ರಸ್ತುತ ಬೆಳ್ತಂಗಡಿಯ ಲಾಯಿಲ ಗ್ರಾಮದ ಕರ್ನೋಡಿಯಲ್ಲಿರುವ ಅಜ್ಜನ ಮನೆಯಲ್ಲಿ ವಾಸವಿದ್ದ ಬಿ. ಸುದೀಪ್ ರೈ (36) ಎಂದು ಗುರುತಿಸಲಾಗಿದೆ.

ಮಾ.17 ರಂದು ಸುದೀಪ್ ರೈ ಅವರು ಪತ್ನಿಯ ಮನೆಯಲ್ಲಿ ಆಹಾರದ ಜೊತೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಅವರು, ಭಾನುವಾರ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಸುದೀಪ್ ರೈ ಅವರು ಪುತ್ತೂರು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಕಳ ತಾಲೂಕಿನ ಕಾಜೆ ನಿವಾಸಿಯನ್ನು ಫೆ.17 ರಂದು ಕುಟುಂಬದವರಿಗೆ ತಿಳಿಸದೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article